Site icon TUNGATARANGA

ಜು.13 ರಿಂದ ತುಂಗಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ನೀರು

ಶಿವಮೊಗ್ಗ ಜುಲೈ 13 : 2023-24 ನೇ ಸಾಲಿನ ಮುಂಗಾರು ಬೆಳಗಳಿಗಾಗಿ ತುಂಗಾ ಅಣೆಕಟ್ಟು ಯೋಜನೆಯ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ಜುಲೈ 13 ರಿಂದ ನವೆಂಬರ್ 30ರವರೆಗೆ ನೀರು ಹರಿಸಲಾಗುವುದು ಎಂದು ತುಂಗಾ ಯೋಜನಾ

ನೀರಾವರಿ ಅಧಿಕಾರಿ ಮತ್ತು ಕಾರ್ಯಪಾಲಕ ಇಂಜಿನಿಯರ್ ಬಿ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯ್ದೆ 1976(31), (1) ರ ಅದಿನಿಯಮದನ್ವಯ ಬೆಳೆ ಮಾದರಿಯನ್ನು ಉಲ್ಲಂಘಿಸುವವರು, ನೀರಾವರಿ ಕಾಲುವೆ ಕಟ್ಟಡಗಳನ್ನು

ಜಖಂಗೊಳಿಸುವವರು, ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸುವವರು ಮತ್ತು ಅನಧಿಕೃತ ನೀರಾವರಿ ಬೆಳೆಗಾರರು ವಿವಿಧ ನಿಯಮಗಳ ಪ್ರಕಾರ ಕಾನೂನು ಕ್ರಮ ಒಳಗಾಗುತ್ತಾರೆ. ಹಾಲಿ ಜಲಾಶಯದಲ್ಲಿ ಇರುವ ನೀರಿನ ಪ್ರಮಾಣವನ್ನು

ಗಣನೆಗೆ ತೆಗೆದುಕೊಂಡು ಅನುಸೂಚಿಯಲ್ಲಿ ನಮೂದಿಸಿದ ಕ್ಷೇತ್ರ ಹಾಗೂ ಬೆಳೆಗಳಿಗೆ ಮಾತ್ರ ನೀರು ಒದಗಿಸಲು ಉದ್ದೇಶಿಸಲಾಗಿರುತ್ತದೆ. ಪ್ರಕಟಿತ ಬೆಳೆಗಳನ್ನು ಬೆಳೆಯದೆ ಬೇರೆ ಬೆಳೆಗಳನ್ನು ಬೆಳೆದು ಬೆಳೆ ಉಲ್ಲಂಘನೆ ಮಾಡಿ ನಷ್ಟ ಅನುಭವಿಸಿದಲ್ಲಿ ಇದಕ್ಕೆ ಸಂಬಂಧಪಟ್ಟ ರೈತರೇ ಹೊಣೆಗಾರರಾಗಿದ್ದು, ಜಲಸಂಪನ್ಮೂಲ ಇಲಾಖೆಯು ಯಾವುದೇ ರೀತಿಯಲ್ಲಿ ಜವಾಬ್ದಾರಿಯಾಗುವುದಿಲ್ಲ. ರೈತ ಬಾಂಧವರು ನೀರಿನ ಸದ್ಬಳಕೆಗೆ ಸಹಕಾರ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version