Site icon TUNGATARANGA

ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ ಅಸಕ್ತರು ಈ ಕೂಡಲೇ ಸಲ್ಲಿಸಿ

ಶಿವಮೊಗ್ಗ, ಜುಲೈ 14,
ಶಿವಮೊಗ್ಗ ತಾಲ್ಲೂಕಿನ ರೈತರುಗಳಿಗೆ ಕೃಷಿಯನ್ನು ಪ್ರೋತ್ಸಾಹಿಸುವ ಸಲುವಾಗಿ 2023-24 ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಮತ್ತು ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರಶಸ್ತಿಯನ್ನು ನೀಡುವ ಕಾರ್ಯಕ್ರಮವನ್ನು ಕೃಷಿ ಇಲಾಖೆಯು ಹಮ್ಮಿಕೊಂಡಿದೆ.


    ಕೃಷಿ ಪಂಡಿತ ಪ್ರಶಸ್ತಿ ಘಟಕದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿರುವ ರೈತರು ಮತ್ತು ರೈತ ಮಹಿಳೆಯರಿಗಾಗಿ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಅಳವಡಿಸಿಕೊಂಡಿರುವ ಬೆಳೆ ಪದ್ದತಿ, ಸಮಗ್ರ ಕೃಷಿ ಪದ್ದತಿ, ಸೂಕ್ಷ್ಮ ನೀರಾವರಿ ಅಳವಡಿಕೆ, ಬಿತ್ತನೆ ಬೀಜ ಬಳಕೆ, ಮಣ್ಣು ನೀರು ಸಂರಕ್ಷಣೆ, ಸಾವಯವ ಕೃಷಿ/ನೈಸರ್ಗಿಕ ಕೃಷಿ ಸಮಗ್ರ ಪೋಷಕಾಂಶ ನಿರ್ವಹಣೆ, ಸಮಗ್ರ ಪೀಡೆ ನಿರ್ವಹಣೆ, ಮಳೆ ನೀರು ಕೊಯ್ಲು, ಕೃಷಿ ಯಾಂತ್ರೀಕರಣ ಹಾಗೂ ಇತರೆ ವಿಷಯಗಳಲ್ಲಿ ರೈತರು ತೊಗಿಡಿಸಿಕೊಂಡಿರುವ ಬಗ್ಗೆ ತಜ್ಞ ಸಮಿತಿಯವರಿಂದ ಪರಿಶೀಲನಾ ಮೌಲ್ಯಮಾಪನ ಮಾಡಿ ಆಯ್ಕೆ ಮಾಡಲಾಗುವುದು.


      ಕೃಷಿ ಪ್ರಶಸ್ತಿ ಘಟಕದಲ್ಲಿ ಇಳುವರಿ ಹೆಚ್ಚಿಸುವ ಸಲುವಾಗಿ ರೈತರಲ್ಲಿ ಕೃಷಿಯನ್ನು ಪ್ರೋತ್ಸಾಹಿಸುವ ಮತ್ತು ಕೃಷಿಯತ್ತ ಆಕರ್ಷಿಸುವ ಸಲುವಾಗಿ ಭತ್ತ ಹಾಗೂ ರಾಗಿ ಬೆಳೆಗಳಲ್ಲಿ ಬೆಳೆ ಸ್ಪರ್ಧೆಗೆ ರೈತ/ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.


     ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜುಲೈ 27 ಮತ್ತು ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ,

ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಆತ್ಮ ಸಿಬ್ಬಂದಿ, ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ, ಸಹಾಯಕ ಕೃಷಿ ನಿರ್ದೇಶಕರನ್ನು ಸೂಕ್ತ ದಾಖಲಾತಿಗಳೊಂದಿಗೆ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಎಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕ ರಮೇಶ್ ಎಸ್ ಟಿ ತಿಳಿಸಿದ್ದಾರೆ.  

Exit mobile version