Site icon TUNGATARANGA

ಮತ್ತೆ ಲಾಕ್ ಡೌನಾ…, ಇನ್ನಷ್ಟು ಸಡಿಲಿಕೆನಾ?

ಮುಖ್ಯಮಂತ್ರಿಗಳೊಂದಿಗೆ ಮೋದಿ ಸಭೆ*

ನವದೆಹಲಿ : ಕರಾಳ ಕೋವಿಡ್ 19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಹೊಸ ಮಾರ್ಗಸೂಚಿಯನ್ನು ನೀಡಲು ಮುಂದಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಿಎಂಗಳ ಜೊತೆ ಸಭೆ ಈ ಬಾರಿ ವಿಭಿನ್ನವಾಗಿರಲಿದೆ. ಅಂದರೆ ದೇಶದ ಎಲ್ಲಾ ರಾಜ್ಯಗಳನ್ನು 2 ಗುಂಪುಗಳಾಗಿ ವಿಂಗಡಿಸಿ ಜೂ. 16 ರಂದು ಮತ್ತು ಜೂನ್ 17 ರಂದು ಪ್ರತ್ಯೇಕ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಜೂನ್ ತಿಂಗಳಲ್ಲಿ ಮೊದಲ ಹಂತದ ಅನ್ ಲಾಕ್ ಘೋಷಿಸಿದ್ದ ಕೇಂದ್ರ ಸರ್ಕಾರ, ಶೈಕ್ಷಣಿಕ ಚಟುವಟಿಕೆ, ಸಿನಿಮಾ, ಅಂತಾರಾಷ್ಟ್ರೀಯ ವಿಮಾನ ಸಂಚಾರದ ಬಗ್ಗೆ ಪರಿಸ್ಥಿತಿ ಆಧರಿಸಿ ಜುಲೈನಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿತ್ತು. ಜೊತೆಗೆ ಎಲ್ಲೆಡೆ ಚರ್ಚೆಯಾಗುತ್ತಿರುವ ಲಾಕ್ ಡೌನ್ ವ್ಯವಸ್ಥೆ ಮತ್ತೆ ಜಾರಿ ಮಾಡುತ್ತಾರಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಜೂ. 16 ಮತ್ತು 17 ರಂದು ನಡೆಯುವ ಸಭೆ ಮಹತ್ವ ಪಡೆದುಕೊಂಡಿದೆ.
ಇನ್ನು ದೇಶದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಮುಖವಾಗಿ ಚರ್ಚಿಸುವ ಸಾಧ್ಯತೆ ಇದೆ.
ಸಭೆ ನಂತರ ನಿರ್ಧಾರ ಪ್ರಕಟಿಸಲು ಮೋದಿ ನಿರ್ಧರಿಸಿದ್ದಾರೆ.

Exit mobile version