Site icon TUNGATARANGA

ಶಿವಮೊಗ್ಗ; ಕತ್ತಿಯಿಂದ ಮಹಿಳೆಯ ಕೊಲೆ/ ಆರೋಪಿಗೆ ಜೀವಾವಧಿ ಶಿಕ್ಷೆ


ಶಿವಮೊಗ್ಗ,ಜು.22:
ಹಳೇ ದ್ವೇಶದ ಹಿನ್ನೆಲೆಯಲ್ಲಿ ಮಹಿಳೆಯ ಕುತ್ತಿಗೆಗೆ ಕತ್ತಿಯಿಂದ ತಿವಿದು ಕೊಲೆ ಮಾಡಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ.


ಸಮಗ್ರ ವಿವರ:
ದಿನಾಂಕಃ 09-10-2021 ರಂದು ಅನಿಲ ವಾಸ ಕಪ್ಪನಹಳ್ಳಿ ಗ್ರಾಮದ ಈತನು, ಅದೇ ಗ್ರಾಮದ ವಾಸಿ 35 ವರ್ಷದ ಮಹಿಳೆಯ ಮೇಲಿದ್ದ ಹಳೆ ದ್ವೇಶದ ಹಿನ್ನೆಲೆಯಲ್ಲಿ, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮಟೆಕೊಪ್ಪ ಗ್ರಾಮದ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದಾಗ ಆಕೆಯ ಕುತ್ತಿಗೆಗೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾನೆಂದು ಮೃತೆಯ ಸಹೋದರ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0193/2021 ಕಲಂ 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.


ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಲಕ್ಷ್ಮಣ್ ಪೊಲೀಸ್ ನಿರೀಕ್ಷಕರು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು ಆರೋಪಿತರ ವಿರುದ್ಧ ಘನ ನ್ಯಾಯಾಲಯ್ಕಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಸರ್ಕಾರದ ಪರವಾಗಿ ಶಾಂತರಾಜ್, ಸರ್ಕಾರಿ ಅಭಿಯೋಜಕರವರು, ಪ್ರಕರಣದ ವಾದ ಮಂಡಿಸಿದ್ದು, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನಾದ ಅನಿಲ 24 ವರ್ಷ, ಕಪ್ಪನಹಳ್ಳಿ ಗ್ರಾಮ ಶಿಕಾರಿಪುರ ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಕೆ ಮಾನು ರವರು ಆರೋಪಿತನಿಗೆ ಜೀವಾವಧಿ ಶಿಕ್ಷೆ ಮತ್ತು 50,000/- ರೂ ದಂಡ, ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.

Exit mobile version