ಶಿವಮೊಗ್ಗ: ಹಲವಾರು ವ?ದಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರಾರಂಭಕ್ಕೆ ಅವಿರತ ಶ್ರಮ ವಹಿಸಿ ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸಿದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಭಿನಂದನೆ ಸಲ್ಲಿಸಿದೆ.
ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ. ಮುಚ್ಚಿ ಹೋಗಲಿದ್ದ ಕಾರ್ಖಾನೆಯ ಪುನರಾರಂಭಕ್ಕೆ ಕೇಂದ್ರದ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಶಿವಮೊಗ್ಗ ಜಿಲ್ಲೆಯ ಕೈಗಾರಿಕೆಗೆ ಪ್ರಾಮುಖ್ಯತೆ ನೀಡಿದ ಪರಿಣಾಮ ಕಾರ್ಖಾನೆ ಪುನರ್ ಆರಂಭವಾಗುತ್ತಿದೆ.
ಸಂಸದರ ಪ್ರಯತ್ನದಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿದೆ. ಇದೇ ತಿಂಗಳಿನಿಂದ ವಿಮಾನ ಹಾರಾಟ ಕೂಡ ಪ್ರಾರಂಭವಾಗಲಿದ್ದು, ಶಿವಮೊಗ್ಗ ಜಿಲ್ಲೆಯ ಕೈಗಾರಿಕೆ ಹಾಗೂ ಉದ್ಯಮದ ದೃಷ್ಟಿಯಿಂದ ಮಹತ್ತರ ಪ್ರಯೋಜನ ಸಿಗಲಿದೆ.
ಜಿಲ್ಲೆಯಲ್ಲಿ ಹೊಸ ಕೈಗಾರಿಕೆ ಸ್ಥಾಪನೆಗೆ ಪೂರಕ ವಾತಾವರಣವಿದ್ದು, ಹೊಸ ಕೈಗಾರಿಕೆಗಳನ್ನು ಶಿವಮೊಗ್ಗ ಜಿಲ್ಲೆಗೆ ತರುವುದರ ಮೂಲಕ ಆರ್ಥಿಕ ಸದೃಢತೆಗೆ ಸಹಕರಿಸಬೇಕು. ದೇವಕಾತಿಕೊಪ್ಪದ ಕೈಗಾರಿಕಾ ವಸಾಹತು ಸಿದ್ಧಗೊಂಡಿದ್ದು,
ಕೈಗಾರಿಕೆ ಪ್ರಾರಂಭಿಸಲು ಬೇಕಾಗಿರುವ ಅವಶ್ಯಕತೆಗಳನ್ನು ಪೂರೈಸಬೇಕು. ಕೈಗಾರಿಕೆ ಸ್ಥಾಪಿಸಲು ಅನುಕೂಲ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ