Site icon TUNGATARANGA

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅವಮಾನ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಂಧನಕ್ಕೆ ಅಗ್ರಹ

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ತಕ್ಷಣ ಕ್ರಮ ಕೈಗೊಂಡು ಬಂಧಿಸುವಂತೆ ಆಗ್ರಹಿಸಿ ಇಂದು ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಸಮಿತಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.


ತೀರ್ಥಹಳ್ಳಿಯಲ್ಲಿ ಆ.೧ರಂದು ಡಾ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಕೋಟ್ಯಂತರ ಕಾರ್ಯಕರ್ತರ, ಅಭಿಮಾನಿಗಳ ಮನಸ್ಸಿಗೆ ಘಾಸಿಯನ್ನುಂಟು ಮಾಡಿದೆ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.


ಗೃಹಸಚಿವ ಸ್ಥಾನದಂತಹ ಹುದ್ದೆ ನಿಭಾಯಿಸಿದ್ದ ಆರಗ ಜ್ಞಾನೇಂದ್ರ ಮಲ್ಲಿಕಾರ್ಜುನ ಖರ್ಗೆಯವರ ಬಣ್ಣ ಹಾಗೂ ತಲೆಕೂದಲನ್ನು ಉದಾಹರಣೆ ಕೊಟ್ಟು ನಮ್ಮ

ದುರಾದೃ? ಏನೆಂದರೆ ನಮ್ಮ ಅರಣ್ಯ ಸಚಿವರಿಗೆ ಮರ ಗಿಡ ಅಂದರೆ ಏನೆಂದೇ ಗೊತ್ತಿಲ್ಲ. ಸುಟ್ಟು ಕರಕಲಾಗಿರುತ್ತಾರೆ. ನಮ್ಮ ಖರ್ಗೆಯವರನ್ನ ನೋಡಿದರೆ ಗೊತ್ತಾಗುತ್ತದೆ, ತಲೆಕೂದಲು ಮುಚ್ಚಿಕೊಂಡಿರುವುದರಿಂದ ಅದು ಸ್ವಲ್ಪ ಉಳಿದುಕೊಂಡಿದೆ’ ಎಂದು ಹೇಳುವ ಮೂಲಕ ನಮ್ಮ ರಾಷ್ಟ್ರೀಯ ನಾಯಕರನ್ನು ಅಪಮಾನಿಸಿ, ಕೋಟ್ಯಂತರ ಕಾರ್ಯಕರ್ತರ ಮನಸ್ಸಿಗೆ


ತೀವ್ರ ಘಾಸಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿದರು.
ಆದ್ದರಿಂದ ಜಿಲ್ಲಾ ರಕ್ಷಣಾಧಿಕಾರಿಗಳು, ಕೂಡಲೇ ಆರಗ ಜ್ಞಾನೇಂದ್ರ ಅವರ ವಿರುದ್ಧ ಕೇಸು ದಾಖಲಿಸಿ ಅವರನ್ನು ಬಂಧಿಸಬೇಕು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ

ಆರಗ ಜ್ಞಾನೇಂದ್ರ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಪ್ರತಿಭಟನೆಯಲ್ಲಿ ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ, ಸುವರ್ಣ ನಾಗರಾಜ್, ಸ್ಟೆಲ್ಲಾ ಮಾರ್ಟಿನ್, ಶಮೀಮ್ ಬಾನು, ಚಂದ್ರಕಲಾ, ರಜಿಯಾ, ಮುಜೀಬ್, ಸುಹೇಲ್, ಮಂಜುನಾಥ್, ಅರ್ಚನಾ ಸೇರಿದಂತೆ ಹಲವರು ಭಾಗವಹಿಸಿದ್ದರು

Exit mobile version