Site icon TUNGATARANGA

ಶಿವಮೊಗ್ಗ/ ನಾಳಿನ ಹರೋಹರ ಜಾತ್ರೆ/ ಈ ರಸ್ತೆಗಳಲ್ಲಿ ಮಾತ್ರ ಓಡಾಡಿ

ದಿನಾಂಕಃ 09-08-2023  ರ ನಾಳೆ ಶಿವಮೊಗ್ಗ ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಅಡಿಕೃತ್ತಿಕೆ ಹರೋಹರ ಜಾತ್ರೆ ಪ್ರಯುಕ್ತ, ಸುಗಮ ಸಂಚಾರದ ಹಿತ ದೃಷ್ಟಿಯಿಂದ ದಿನಾಂಕ: 09-08-2023 ರಂದು ಈ ಕೆಳಕಂಡಂತೆ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ.      

1) ಬೆಂಗಳೂರು, ಭದ್ರಾವತಿ, ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳು ಮತ್ತು ಸಿಟಿ ಬಸ್ ಗಳು ಹಾಗೂ ಕಾರುಗಳು ಎಂ.ಆರ್.ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

2) ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೂನ್ನೂರು ಕಡೆಗೆ ಹೋಗುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳು ಮತ್ತು ಸಿಟಿ ಬಸ್ ಗಳು ಹಾಗೂ ಕಾರುಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

3) ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಶಿವಮೊಗ್ಗ ನಗರಕ್ಕೆ ಒಳಬರುವ ಮತ್ತು ಹೊರಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆಯ ಮೂಲಕ ಶಿವಮೊಗ್ಗ ನಗರಕ್ಕೆ ಒಳಬರುವುದು ಮತ್ತು ಹೊರ ಹೋಗುವುದು.

4) ಹೊಳೆಹೊನ್ನೂರು ಸರ್ಕಲ್ ನಿಂದ ಗುರುಪುರದ ಯಲವಟ್ಟಿ ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.

5) ಚಿತ್ರದುರ್ಗ ಹೊಳೆಹೂನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಲಘು ವಾಹನಗಳು ಪಿಳ್ಳಿಂಗಿರಿ ಕ್ರಾಸ್ ನಿಂದ ಯಲವಟ್ಟಿ ಮಾರ್ಗವಾಗಿ ಮತ್ತು ಹೊಳೆಬೆನವಳ್ಳಿ ತಾಂಡ ಕ್ರಾಸ್ ನಿಂದ ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪದ ಮೂಲಕ ಬಿ.ಹೆಚ್ ರಸ್ತೆಗೆ ಸೇರಿಕೊಂಡು ಬೈಪಾಸ್ ರಸ್ತೆಯ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಹೋಗುವುದು.

6) ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು (ದ್ವಿಚಕ್ರ ಮತ್ತು ಕಾರುಗಳು) ಬೈಪಾಸ್ ರಸ್ತೆಯ ಮಾರ್ಗವಾಗಿ ಮಲವಗೊಪ್ಪದ ಯಲವಟ್ಟಿ ಕ್ರಾಸ್ ನಿಂದ ಯಲವಟ್ಟಿ ಮಾರ್ಗವಾಗಿ ಪಿಳ್ಳಿಂಗಿರಿ ಕ್ರಾಸ್ ಮೂಲಕ ಹೊಳೆಹೂನ್ನೂರು ಚಿತ್ರದುರ್ಗಕ್ಕೆ ಹೋಗುವುದು.

7) ಹರಿಹರ, ಹೊನ್ನಾಳಿ ಯಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್ ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್ ಕೆ.ಇ.ಬಿ ಸರ್ಕಲ್ ಉಷಾ ನರ್ಸಿಂಗ್ ಹೋಂ ಸರ್ಕಲ್ 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.

Exit mobile version