Site icon TUNGATARANGA

ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಶಿವಮೊಗ್ಗ: ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಹೆಚ್.ಎಸ್. ಸುಂದರೇಶ್, ಆರ್. ಪ್ರಸನ್ನಕುಮಾರ್, ಎನ್. ರಮೇಶ್ ಮಂಜುನಾಥ ಬಾಬು, ಎಸ್.ಪಿ. ಶೇಷಾದ್ರಿ, ಚಿನ್ನಪ್ಪ, ಚಂದ್ರಭೂಪಾಲ್, ವಿಶ್ವನಾಥ ಕಾಶಿ, ಇಕ್ಕೇರಿ ರಮೇರ್ಶ ಸೇರಿದಂತೆ ಹಲವು ಗಣ್ಯರಿದ್ದರು

ಇಂದು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ 77ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ದ್ವಜಾರೋಹಣವನ್ನು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಮಾಜಿ ಯೋಧರಾದ ಮೋಹನ್ ಸಿ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರ್ ಡಿ ಆರ್ ನಾಗೇಶ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶೋಭಾವೆಂಕಟರಮಣ, ಮುಖ್ಯ ಶಿಕ್ಷಕ ತೀರ್ಥೇಶ್, ಮುಂತಾದವರು ಉಪಸ್ಥಿತರಿದ್ದರು.

ಶಿವಮೊಗ್ಗ ಇಂದು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪದಾಧಿಕಾರಿಗಳು ಇದ್ದರು

ಶಿವಮೊಗ್ಗ: ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಆರ್.ಕೆ. ಸಿದ್ರಾಮಣ್ಣ, ಗಿರೀಶ್ ಪಟೇಲ್, ಎಸ್. ಜ್ಞಾನೇಶ್ವರ್, ಎಸ್.ಎಸ್. ಜ್ಯೋತಿಪ್ರಕಾಶ್ ಇನ್ನಿತರರಿದ್ದರು.

ಶಿವಮೊಗ್ಗ: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು ೭೭ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಂಗೋಲಿ ಹಬ್ಬ ಆಯೋಜಿಸಿ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳು ಭಾಗವಹಿಸಿ, ಆಕ?ಕ ರಂಗೋಲಿಗಳನ್ನು ಬಿಡಿಸಿದರು
.

ಶಿವಮೊಗ್ಗ: ವಿಮಾನ ನಿಲ್ದಾಣದಲ್ಲಿ ಇಂದು ಪ್ರಥಮ ಬಾರಿಗೆ ೭೭ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ರಿಗೇಡಿಯನ್ ಡಿ.ಎಂ. ಪೂರ್ವಿಮಠ್ ಹಾಗೂ ಅಧಿಕಾರಿಗಳಾದ ಶಮಂತ್, ವಿನೋದ್‌ಕುಮಾರ್, ಚಿದಾನಂದರಾವ್, ಗಣೇಶ್, ಆಕಾಸ್, ಗೀತಾ, ಸಂಪತ್, ಮಮತಾ, ಇಕ್ಬಾಲ್ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿ ಕಾಮನ್ ಮ್ಯಾನ್ ಸಂಸ್ಥೆ ವತಿಯಿಂದ ೭೭ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ೨೨೫ನೇ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗಣೇಶ್ ಬಿಳಿಗಿ, ಆರ್.ಆರ್. ಮಂಜುನಾಥ್ ದೊರೈ, ಚಿನ್ನಪ್ಪ, ಖಾದಿ ರಾಜಣ್ಣ, ಸಂಜಯ್ ನಾಗಭೂಷಣ್, ಮಂಜುನಾಥ್ ಪ್ರವೀಣ್ ಕರಿಯಪ್ಪ ಹಾಗೂ ಇನ್ನಿತರರು ಭಾಗವಹಿಸಿದ್ದರು.

ಶಿವಮೊಗ್ಗ ಜಿಲ್ಲಾ ಮಾಜಿ ಸೈನಿಕರ ಸಂಘ (ರಿ), ಶಿವಮೊಗ್ಗದ ವತಿಯಿಂದ ಸೈನಿಕ ಉದ್ಯಾನವನದಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಲ್ ರಘುನಾಥ್ (ನಿವೃತ್ತ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ, ಶಿವಮೊಗ್ಗ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ವಿ ಕೃಷ್ಣರೆಡ್ಡಿಯವರು, ಕಾರ್ಯದರ್ಶಿ ಉಮೇಶ್ ಬಾಪಟ್, ಪದಾಧಿಕಾರಿಗಳಾದ ರಘುನಾಥ್, ಎಸ್, ಕೆ.ಎಸ್, ಉದಯ, ವಿ. ಎನ್ ಮೂರ್ತಿ, ಅನಿಲ್ ಪಿ.ಜಿ, ಶ್ರೀನಾಥ್ ಜಿ.ಆರ್ ಮತ್ತಿತರರಿದ್ದರು.
ಶಿವಮೊಗ್ಗ: ಪಿಇಎಸ್ ಪಬ್ಲಿಕ್ ಶಾಲೆಯು ಪಿಇಎಸ್ ಸಮೂಹ ಸಂಸ್ಥೆಗಳೊಂದಿಗೆ ೭೭ನೇ ಸ್ವಾತಂತ್ರೋತ್ಸವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅರುಣಾದೇವಿ ಎಸ್. ವೈ, ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ. ಆರ್, ಸಮೂಹ ಸಂಸ್ಥೆಯ ಎಲ್ಲಾ ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ’ಶಕ್ತಿ ಸೂಪರ್ ಸ್ತ್ರೀ’ (ಅದ್ಭುತ ಮಹಿಳೆ’ ) ಶೀರ್ಷಿಕೆ ಅಡಿಯಲ್ಲಿ ನಗರದ ಹರಿಗೆ ಬಡಾವಣೆಯ ಶ್ರೀ ಕಾಲಭೈರವೇಶ್ವರ ವೃದ್ಧಾಶ್ರಮದ ಆವರಣದಲ್ಲಿ ಮಹಿಳಾ ಪ್ರಮುಖರಾದ ಲಕ್ಷ್ಮಿ.ಕೆ, ಫರೀದಾ ಭಾನು, ರೇಣುಕಾ,ಲಕ್ಷ್ಮಿ, ಶೋಭಾ ರವರುಗಳು ಧ್ವಜಾರೋಹಣ ಮಾಡಿ “ಅದ್ಭುತ ಮಹಿಳೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ಮತ್ತಿತರರಿದ್ದರು.ಶಿವಮೊಗ್ಗ: ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ೭೭ನೇ ಸ್ವಾತಂತ್ರ್ಯ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ಸಿ.ಮಂಜುನಾಥ್, ಡಿವಿಎಸ್ ಮಾಜಿ ಅಧ್ಯಕ್ಷ ಕೆ.ಬಸಪ್ಪಗೌಡ, ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಎ.ಇ.ರಾಜಶೇಖರ್, ಆರ್.ಲಕ್ಷ್ಮೀದೇವಿ, ಹರೀಶ್, ಎನ್‌ಎಸ್‌ಎಸ್, ರೇಂಜರ‍್ಸ್, ರೋವರ‍್ಸ್ ಘಟಕದ ಪ್ರತಿನಿಧಿಗಳು, ಬೋಧಕ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

Exit mobile version