Site icon TUNGATARANGA

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಪಾರ ಪ್ರಮಾಣದ ಹಾನಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ಪರಿಹಾರ ಕೊಡಿಸುದಾಗಿ ಭರವಸೆ

ಶಿವಮೊಗ್ಗ: ಲಷ್ಕರ್ ಮೊಹಲ್ಲಾದ ಏಲಕಪ್ಪನ ಕೇರಿಯ ೩ನೇ ತಿರುವಿನಲ್ಲಿ ಜಾವಿದ್ ಎಂಬುವವರ ಮನೆಯಲ್ಲಿ ನಿನ್ನೆ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ

ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು ಈ ಮನೆ ಶಫಿವುಲ್ಲಾ ಎಂಬುವರಿಗೆ ಸೇರಿದ್ದಾಗಿದೆ.
ಮನೆಯ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿದ್ದು,

ಮನೆಯ ಮೇಲ್ಛಾವಣಿ ಹಾಗೂ ಮನೆಯ ಎಲ್ಲಾ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.


ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ ಭೇಟಿ ನೀಡಿ ಸಂತ್ರಸ್ತರಿಗೆ ಸಮಾಧಾನ ಹೇಳಿ ಪಾಲಿಕೆ ಹಾಗೂ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಪ್ರವೀಣ್‌ಕುಮಾರ್, ಶಫಿವುಲ್ಲಾ, ಜಾವೀದ್ ಮತ್ತಿತರು ಇದ್ದರು.

Exit mobile version