ಶಿವಮೊಗ್ಗ: ೧ನೇ ವಾರ್ಡ್‌ನಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಕೂಡಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ೧ನೇ ವಾರ್ಡ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು
.
ಈ ವಾರ್ಡಿನಲ್ಲಿ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಇದ್ದು, ಈ ಬಗ್ಗೆ ದೂರು ನೀಡಿದರೆ ಪೌರ ಕಾರ್ಮಿಕರ ಸಂಖ್ಯೆ ಕಡಿಮೆ ಇದೆ ಎಂಬ ಉತ್ತರ ನೀಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿ ವಿವಿಧ ಕಾಯಿಲೆಗಳುಹಬ್ಬುತ್ತಿವೆ.
ಇದರಿಂದ ವಿದ್ಯಾರ್ಥಿಗಳು, ಮಕ್ಕಳು ಮತ್ತು ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ.
ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಕೂಡಲೇ ಪಾಲಿಕೆ ಕಾರ್ಮಿಕರ ಸಂಖ್ಯೆ ಹೆಚ್ಚಿಸಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಔಷಧಿ ಸಿಂಪಡಿಸಬೇಕು ಹಾಗೂ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಎಸ್.ಚಿನ್ನಪ್ಪ, ಎಸ್. ತಂಗರಾಜ್, ಕೆ. ಈಶ್ವರ್, ಆರ್.ಆರ್. ಮಂಜುನಾಥ್, ಬಸವರಾಜ್, ಮೋಹನ್, ಶೋs, ವೇದಮೂರ್ತಿ ಮತ್ತಿತರರು ಇದ್ದರು.