Site icon TUNGATARANGA

ಸೆ.6 ರಂದು ಕುವೆಂಪು ರಂಗ ಮಂದಿರದಲ್ಲಿ ಶ್ರೀಕೃಷ್ಣ ಜಯಂತಿ| ಸಚಿವ ಮಧುಬಂಗಾರಪ್ಪ ರವರಿಂದ ಕಾರ್ಯಕ್ರಮ ಉದ್ಘಾಟನೆ

ಶಿವಮೊಗ್ಗ, ಸೆಪ್ಟೆಂಬರ್,02
     ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.06 ರ  ಬೆಳಿಗ್ಗೆ 11 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಏರ್ಪಡಿಸಲಾಗಿದೆ.


          ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ನೆರವೇರಿಸುವರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು.


       ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷರು ಮುಖ್ಯ

ಅತಿಥಿಗಳಾಗಿ ಪಾಲ್ಗೊಳ್ಳುವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪೆÇಲೀಸ್ ವರಿμÁ್ಟಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಸರ್ಕಾರಿ ಅಧಿಕಾರಿಗಳು ಪಾಲ್ಗೊಳ್ಳುವರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಅಧ್ಯಾಪಕರಾದ ಡಾ.ಜಿ.ಕೆ ಪ್ರೇಮ ಇವರು ವಿಶೇಷ ಉಪನ್ಯಾಸ ನೀಡುವರು.

Exit mobile version