ಶಿವಮೊಗ್ಗ: ರಾಜ್ಯಕ್ಕೆ ಬರಗಾಲ ಕಾಲಿಟ್ಟಿದ್ದು, ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಮಳೆ ಕೈಕೊಟ್ಟಿದೆ. ಬರಗಾಲ ಕಾಲಿಟ್ಟಿದೆ. ರೈತರು ಸಂಕಷ್ಟದಲ್ಲಿದ್ದಾರೆ ಭತ್ತ ಹಾಗೂ ಮೆಕ್ಕೆಜೋಳ ಸಂಪೂರ್ಣವಾಗಿ ನಾಶವಾಗಿದೆ. ಆದ್ದರಿಂದ ರೈತರಿಗೆ ಪ್ರತಿ ಎಕರೆ ಭತ್ತಕ್ಕೆ ೩೦ ಸಾವಿರ ಮೆಕ್ಕೆಜೋಳಕ್ಕೆ ೨೫ ಸಾವಿರ ಪರಿಹಾರ ನೀಡಬೇಕು.
ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ಸಾಧ್ಯವಾದರೆ ಮೋಡ ಬಿತ್ತನೆ ಮಾಡಬೇಕು ಎಂದು ಆಗ್ರಹಿಸಿದರು.
ಭದ್ರಾ ಅಣೆಕಟ್ಟಿನಲ್ಲಿ ನೀರು ತುಂಬಾ ಕಡಿಮೆ ಇದೆ.ಇಂತಹ ಸಂದರ್ಭದಲ್ಲಿ ನೂರು ದಿನಗಳ ಕಾಲ ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಿರುವುದು ಸರಿಯಲ್ಲ. ಕುಡಿಯುವನೀರಿನ ಸಮಸ್ಯೆ ಗಮನದಲ್ಲಿಟ್ಟುಕೊಂಡು ಹದಿನೈದು ದಿನ ಮಾತ್ರ ನೀರು ಹರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ವೆಂಕಟೇಶ್ ಮತ್ತಿತರರು ಇದ್ದರು.