Site icon TUNGATARANGA

ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ಹೇಳಿಕೆ ಖಂಡಿಸಿ | ಪ್ರತಿಕೃತಿ ದಹಿಸಿ ಆಕ್ರೋಶ

ಸಾಗರ : ಇಲ್ಲಿನ ಸಾಗರ ಹೋಟೆಲ್ ವೃತ್ತದಲ್ಲಿ ಮಂಗಳವಾರ ರಾತ್ರಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಇದ್ದಹಾಗೆ, ಸನಾತನ ಧರ್ಮವನ್ನು ವಿರೋಧಿಸಿದರಷ್ಟೇ ಸಾಲದು ನಾಶಪಡಿಸಬೇಕು ಎಂದು ಹೇಳಿರುವ ತಮಿಳುನಾಡು

ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ಹೇಳಿಕೆ ಖಂಡಿಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ, ಜಿಲ್ಲಾ ಸಂಯೋಜಕ ಸಂತೋಷ್ ಶಿವಾಜಿ, ಪ್ರಮುಖರಾದ ಐ.ವಿ.ಹೆಗಡೆ ಇನ್ನಿತರರು

ಮಾತನಾಡಿದರು. ಪ್ರತಿಭಟನೆಯಲ್ಲಿ ಪ್ರಜಿತ್, ಮಂಜುಗೌಡ, ಕಿರಣ್, ಅಜಿತ್, ಸುನೀಲ್ ರುದ್ರಪ್ಪ, ನವಿನ್ ಯಳವರಸಿ, ಪ್ರವೀಣ್ ಕೆ.ವಿ., ವಿರೂಪಾಕ್ಷ, ಅಣ್ಣಪ್ಪ, ಸಚಿನ್, ಸಂತೋಷ್ ಇನ್ನಿತರರು ಹಾಜರಿದ್ದರು.

Exit mobile version