Site icon TUNGATARANGA

ಶಿವಮೊಗ್ಗ |ಪ್ರಗತಿಪರ ರೈತ/ರೈತ ಮಹಿಳೆಯರಿಂದ ಅರ್ಜಿ ಆಹ್ವಾನ


ಶಿವಮೊಗ್ಗ :ಸೆಪ್ಟಂಬರ್: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವ?ದಂತೆ ಈ ವ?ವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವವಿದ್ಯಾಲಯ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಪ್ರಗತಿ ಪರ ರೈತ/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.


ಅರ್ಜಿ ಸಲ್ಲಿಸಿದ ರೈತ/ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್-೨೦೨೩ ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು.


ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅಥವಾ
https://www.uahs.edu.in ನಲ್ಲಿ ಲಭ್ಯವಿರುವ ಅರ್ಜಿ ತೆಗೆದುಕೊಂಡು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಅ.೩೦ ರ ಒಳಗೆ ತಲುಪುವಂತೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಸಹ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ ಇವರನ್ನು ಸಂಪರ್ಕಿಸಬೇಕಾದ ಸಂಖ್ಯೆಗಳು: ಶಿವಮೊಗ್ಗ- ೯೪೮೦೮೩೮೯೭೬, ೮೨೭೭೯೩೨೬೦೦, ದಾವಣಗೆರೆ-೯೪೮೦೮೩೮೨೦೯, ಚಿಕ್ಕಮಗಳೂರು- ೯೪೮೦೮೩೮೨೦೩, ೮೨೭೭೯೩೦೮೯೦, ಉಡುಪಿ-೯೪೮೦೮೩೮೨೦೨, ೮೨೭೭೯೩೨೫೦೦, ಚಿತ್ರದುರ್ಗ-೯೪೮೦೮೩೮೨೦೧, ದಕ್ಷಿಣ ಕನ್ನಡ- ೮೭೯೪೭೦೬೪೬೮, ೮೨೭೭೯೩೧೦೬೦, ಮಡಿಕೇರಿ- ೯೪೮೦೮೩೮೨೧೦, ೭೨೫೯೦೦೫೫೪೦.

Exit mobile version