ಹೊಸನಗರ: ನಿಷ್ಕಲ್ಮಶ ಮನಸ್ಸಿನಿಂದ ಬೆಳಿಗ್ಗೆ ೫ಗಂಟೆಯಿಂದ ಸ್ವಚ್ಛಗೊಳಿಸುತ್ತಿರುವ ಪೌರ ಕಾರ್ಮಿಕರು ಎಂದೆಂದಿಗೂ ಸುಖ ಸಂತೋಷದಿಂದಿರಲೀ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಹೇಳಿದರು.
ಹೊಸನಗರ ಪಟ್ಟಣ ಪಂಚಾಯತಿಯ ಆವರಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪೌರ ಕಾರ್ಮಿಕರು ಶ್ರಮಜೀವಿಗಳಾದರೂ ಅವರ ಬದುಕು ಗಟ್ಟಿತನ ಕಾಣದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಶಾಸಕರು ತಮ್ಮ ಮಕ್ಕಳಿಗೆ ವಿದ್ಯಾಬ್ಯಾಸ ನೀಡುವ ಮೂಲಕ ತಮ್ಮ ಮುಂದಿನ ಪೀಳಿಗೆಯ ಬದುಕುವ ರೀತಿಯಲ್ಲಿ ಸಾಗುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದ ಅವರು ೬ಜನ ಪೌರ ಕಾರ್ಮಿಕರಿಗೆ ಖಾಯಂ ಆದೇಶ ಪತ್ರವನ್ನು ಈ ಸಂದರ್ಭದಲ್ಲಿ ವಿತರಿಸಿದರು.
ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಪೌರ ಕಾರ್ಮಿಕರಿಗೆ ಶಾಸಕರು ಶಾಲು ಹೊದಿಸಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಹೊಸನಗರ ಮಾವಿನಕೊಪ್ಪದಿಂದ ಪೌರ ಕಾರ್ಮಿಕರನ್ನು ಹೂವಿನ ಮೆರವಣಿಗೆ ಮೂಲಕ ಪಟ್ಟಣ ಪಂಚಾಯತಿವರೆವಿಗೆ ಮೆರವಣಿಗೆ ನಡೆಸಿ ಗೌರವಿಸಿದರು..
ಈ ಸಂದರ್ಭದಲ್ಲಿ ಹೊಸನಗರದ ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟೋ ಪ್ರಬಾರ ಮುಖ್ಯಾಧಿಕಾರಿ ಉಮಾಶಂಕರ್, ಪಟ್ಟಣ ಪಂಚಾಯತಿಯ ಎಲ್ಲ ಸದಸ್ಯರು ಹಾಗೂ ಎಲ್ಲ ನೌಕರರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸಂತಾಪ: ಹೊಸನಗರ ಪಟ್ಟಣ ಪಂಚಾಯತಿಯಲ್ಲಿ ಪೌರ ಕಾರ್ಮಿಕರಾಗಿ ೧೩ ವರ್ಷಗಳಿಂದ ನಿಷ್ಠಾವಂತರಾಗಿ ಕೆಲಸ ಮಾಡುತ್ತಿದ್ದ ಸರಸ್ವತಿ ಕೋಂ ಕೃಷ್ಣಪ್ಪನವರು ಆನಾರೋಗ್ಯದಿಂದ ನಿಧನರಾಗಿದ್ದು
ಇವರನ್ನು ಈ ಪೌರ ಕಾರ್ಮಿಕರ ದಿನದಂದು ಎಲ್ಲ ಪೌರ ಕಾರ್ಮಿಕರು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸದಸ್ಯರುಗಳು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವುದರ ಜೊತೆಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.