Site icon TUNGATARANGA

ಪ್ರವಾಸಿ ತಾಣಗಳಲ್ಲಿ ಸ್ವಚ್ಚತೆ ಕಾಪಾಡುವುದು ಎಲ್ಲರ ಕರ್ತವ್ಯ|ಸಕ್ರೆಬೈಲ್ ಆನೆ ಬಿಡಾರದಲ್ಲಿ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿ: ಸ್ನೇಹಲ್ ಸುಧಾಕರ ಲೋಖಂಡೆ ಹೇಳಿಕೆ


ಶಿವಮೊಗ,್ಗ ಸೆಪ್ಟೆಂಬರ್ 27,
   ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರೀಕರ ಆದ್ಯ ಕರ್ತವ್ಯವಾಗಿದೆ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಕುರಿತು ಜನಾಂದೋಲನವಾಗಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಹಾಗೂ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾದ  ಸ್ನೇಹಲ್ ಸುಧಾಕರ್ ಲೋಖಂಡೆ ಹೇಳಿದರು


       ಸ್ವಚ್ಚತಾ ಹಿ ಸೇವಾ ಅಭಿಯಾನದ ಅಡಿಯಲ್ಲಿ ದಿನಾಂಕ : 27-09-2023 ರಂದು ಸಕ್ರೈಬೈಲಿನ ಆನೆಗಳ ಬಿಡಾರದಲ್ಲಿ ಏರ್ಪಡಿಸಿದ್ದ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.


     ಈ ವೇಳೆ ಅವರು ಮಾತನಾಡಿ, ಸಾರ್ವಜನಿಕರಲ್ಲಿ ಪ್ಲಾಸ್ಟಿಕ್‍ನಿಂದ ಆರೋಗ್ಯದ ಮೇಲೆ, ಪರಿಸ, ವನ್ಯಜೀವಿಗಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು.


       ಕುವೆಂಪು ವಿಶ್ವವಿದ್ಯಾಲಯದ ರಾ.ಸೇ.ಯೋ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ
ಡಾ. ನಾಗರಾಜ ಪರಿಸರ  ಮಾತನಾಡಿ, ಪ್ಲಾಸ್ಟಿಕ್‍ನ ಅವ್ಯಾಹತ ಬಳಕೆಯಿಂದ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿದ್ದು, ಏಕಬಳಕೆಯ ಪ್ಲಾಸ್ಟಿಕ್ ಉತ್ಪತ್ತಿಗೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಬಹುದೊಡ್ಡ ಗಂಡಾಂತರವನ್ನು ಎದುರಿಸಬೇಕಾಗುತ್ತದೆ. ಏಕಬಳಕೆಯ ಪ್ಲಾಸ್ಟಿಕ್ ನಿμÉೀಧಿಸಲಾಗಿದ್ದರೂ ಸಸಹ ಉತ್ಪತ್ತಿ ಯಾಕೆ ಆಗುತ್ತಿದೆ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ.  ಆದ್ದರಿಂದ ಕೂಡಲೆ ಎಲ್ಲರೂ ಎಚ್ಚೆತ್ತುಕೊಂಡು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.


       ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿ ಎಸ್ ನಾಗರಾಜ್ ಮಾತನಾಡಿ ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ಕೂಡಲೆ ನಿಲ್ಲಿಸುವಂತೆ ಆದೇಶ ಹೊರಡಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ವಿನಂತಿಸಿದರು.  


      ಕಾರ್ಯಕ್ರಮದಲ್ಲಿ ಆರ್ ಎಫ್ ಓ ವಿನಯ್ ಕುಮಾರ್, ತಾಲೂಕ್ ಪಂಚಾಯತ್ ಸಹಾಯಕ ನಿರ್ದೇಶಕರಾದ ಲೋಹಿತ್ ಎಸ್,  ರವಿ, ರಾಮಚಂದ್ರ,  ಮುರಾರ್ಜಿ ಶಾಲೆಯ ಪ್ರಾಂಶುಪಾಲರು ಮತ್ತು ಪಿ ಡಿ ಓ ಕೃಷ್ಣ ಮೂರ್ತಿ, ಸಿಬ್ಬಂದಿಗಳಾದ ಕುಮಾರ್, ಗೌರಿಶಂಕರ್, ಗಣೇಶ್, ಜಯಂತ್ ಬಾಬು, ಅರುಣ್ ಇನ್ನಿತರ ಸಾರ್ವಜನಿಕರು ಉಪಸ್ಥಿತರಿದ್ದರು.

Exit mobile version