Site icon TUNGATARANGA

ಕರ್ನಾಟಕ ಬಂದ್‌ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ |ಪ್ರತಿಭಟನೆಗೆ ಸೀಮಿತವಾದ ಕಾವೇರಿ ಹೋರಾಟ

ಶಿವಮೊಗ್ಗ: ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ, ರೈತ ಪರ ಸಂಘಟನೆಗಳಿಂದ ಇಂದು ಕರೆನೀಡಿದ್ದ ಕರ್ನಾಟಕ ಬಂದ್‌ಗೆ ಶಿವಮೊಗ್ಗದಲ್ಲಿ ನೀರ ಪ್ರತಿಕ್ರಿಯೆ ವ್ಯಕ್ತವಾಗಿದೆ.


ನಗರದಲ್ಲಿ ಎಂದಿನಂತೆ ವಾಣಿಜ್ಯ ವಹಿವಾಟು, ಶಾಲಾ-ಕಾಲೇಜು, ಕಚೇರಿ, ಕಾರ್ಯನಿರ್ವಹಿಸಿವೆ. ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ನೆಹರು ರಸ್ತೆ. ಬಿ.ಹೆಚ್. ರಸ್ತೆ ಸೇರಿದಂತೆ ಹಲವೆಡೆ ಅಂಗಡಿಗಳನ್ನು ಬಂದ್ ಮಾಡಿ ಕರ್ನಾಟಕ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡಿದರು.


ಆದರೂ ವ್ಯಾಪಾರಸ್ತರು ತಮ್ಮ ವ್ಯಾಪಾರ ವಹಿವಾಟು ಮುಂದುವರಿಸಿದ್ದರು. ಸರ್ಕಾರಿ ಮತ್ತು ಖಾಸಗಿ ಬಸ್ ಆಟೋ ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಅಗತ್ಯ ವಸ್ತುಗಳ ಜೊತೆಗೆ ವಿವಿಧ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು ಎಂದಿನಂತೆಯೇ ತೆರೆದಿದ್ದವು. ಜನಜೀವನ ಸಹಜವಾಗಿತ್ತು.


ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ, ಕರ್ನಾಟಕ ರಕ್ಷಣಾವೇದಿಕೆ, ರೈತ ಸಂಘ, ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನಕಾರರನ್ನು ವಾಹನದಲ್ಲಿ ಕರೆದೊಯ್ದರು.


ಶಿವಮೊಗ್ಗ ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಲ್ಲಿಯೂ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತವಾಗಿದೆ. ಎಂದಿನಂತೆ ಕಾರ್ಯಚಟುವಟಿಕೆಗಳು ನಡೆದಿವೆ.

Exit mobile version