Site icon TUNGATARANGA

ಅ.2 ರಿಂದ 3 ರವರೆಗೆ ನೆಹರು ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಅಯೋಜನೆ

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.೦೨ ಮತ್ತು ೦೩ ರಂದು ನೆಹರೂ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದೆ.


ಈ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭವನ್ನು ಅ.೦೩ ರಂದು ಬೆಳಗ್ಗೆ ೧೦.೦೦ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪರವರು ಉದ್ಘಾಟಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್‌ರವರ ಗೌರವ ಉಪಸ್ಥಿತಿ ಇರಲಿದೆ.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ ಶಾಸಕರು, ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನ ಪ್ರತಿನಿಧಿಗಳು,

ಮಹಾನಗರ ಪಾಲಿಕೆ ಸದಸ್ಯರುಗಳು, ಗ್ರಾಮ ಪಂಚಾಯತ್ ಸದಸ್ಯರುಗಳು ಭಾಗವಹಿಸಲಿದ್ದಾರೆ.


ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್., ಜಿ.ಪಂ. ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್‌ಕುಮಾರ್, ಯು.ಸ.ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಉಪಸ್ಥಿತರಿರುವರು.

Exit mobile version