Site icon TUNGATARANGA

ಪದವೀಧರರೇ, ಇತ್ತ ಗಮನಿಸಿ/ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿದರಷ್ಟೇ ಮತದಾನದ ಅವಕಾಶ

ಸುದ್ದಿ, ಮತ್ತು ಜಾಹೀ944825683183

ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತದಾರರ ಪಟ್ಟಿ ಸಿದ್ದತೆಗೆ ವೇಳಾಪಟ್ಟಿ


ಶಿವಮೊಗ್ಗ ,ಅ.01 :
ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ಕೂಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ (ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲ್ಲೂಕುಗಳು) ಜಿಲ್ಲಾಧಿಕಾರಿಗಳನ್ನು, ಆಯುಕ್ತರು, ಮಹಾನಗರ ಪಾಲಿಕೆ ಮಂಗಳೂರು ಮತ್ತು ಶಿವಮೊಗ್ಗ ಹಾಗೂ ಆಯಾ ಉಪವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ.
ಅರ್ಹತಾ ದಿನಾಂಕ 01.11.2023 ಕ್ಕೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.


ಭಾರತ ಚುನಾವಣಾ ಆಯೋಗವು ದಿನಾಂಕ 09.08.2023ರ ಪತ್ರದನ್ವಯ ಕರ್ನಾಟಕ ನೈರುತ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನ 18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ.
ನೈರುತ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲು ಈ ಕೆಳಗಿನಂತ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ನಮೂನೆ 18 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ಮತ್ತು ದಿನ 06.11.2023.
ಕರಡು ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಮತ್ತು ದಿನ 23.11.2023. ಹಕ್ಕು ಮತ್ತು ಆಕ್ಷೇಪಣೆಗಾಗಿ ನಿಗದಿಪಡಿಸಿರುವ ಅವಧಿ 23.11.2023 ರಿಂದ 09.12.2023. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಮತ್ತು ದಿನ 30.12.2023 ಆಗಿರುತ್ತದೆ.
ಕರ್ನಾಟಕ ನೈರುತ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಈ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸುವುದು;

• ಕರ್ನಾಟಕ ನೈರುತ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣಿಗಳು ಇದ್ದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಸೀಲ್ದಾರ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು ಎಂದು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತದಾರರ ನೊಂದಣಾದಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version