Site icon TUNGATARANGA

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದತೆ:|ಅರ್ಹರೆಲ್ಲರನ್ನು ಪಟ್ಟಿಗೆ ಸೇರಿಸಲು ಡಿಸಿ  ಡಾ.ಸೆಲ್ವಮಣಿ ಆರ್ ಸೂಚನೆ


ಶಿವಮೊಗ್ಗ ಅಕ್ಟೋಬರ್ 16,
      ಜಿಲ್ಲೆಯ ಎಲ್ಲಾ ಅಧಿಕಾರಿಗಳು ತಮ್ಮ ಕಚೇರಿಯ ಪದವೀಧರರಾದ ಅಧೀನ ಅಧಿಕಾರಿ/ಸಿಬ್ಬಂದಿಗಳನ್ನು ಕರ್ನಾಟಕ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು  ಡಾ.ಸೆಲ್ವಮಣಿ ಆರ್ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.


      ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


     ಎಲ್ಲ ಇಲಾಖೆಗಳ ಅಧಿಕಾರಿಗಳು/ಮುಖ್ಯಸ್ಥರು ತಮ್ಮ ಕಚೇರಿಯಲ್ಲಿನ ಪದವೀಧರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಪದವೀಧರರನ್ನು ನಮೂನೆ 18 ಮತ್ತು ಶಿಕ್ಷಕರನ್ನು ನಮೂನೆ 19 ರಲ್ಲಿ ಭರ್ತಿ ಮಾಡಿ, ಪದವಿ ಪ್ರಮಾಣ ಪತ್ರವನ್ನು ದೃಢೀಕರಿಸಿ,

ಒಂದು ಭಾವಚಿತ್ರ ಲಗತ್ತಿಸಿ ನ.6 ರೊಳಗೆ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಕಚೇರಿ ಮತ್ತು ನಗರದಲ್ಲಿ ಸ್ಥಳೀಯ ಸಂಸ್ಥೆಗಳು, ಪಾಲಿಕೆಗೆ ನೀಡಬೇಕು.

   
     ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಅರ್ಹತಾ ದಿನಾಂಕ: 01.11.2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01.11.2020 ಕ್ಕಿಂತಲು

ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ನಮೂನೆ-18 ರೊಂದಿಗೆ ಸಲ್ಲಿಸುವ ಪದವಿ ದಾಖಲಾತಿಗಳು ಡೆಸಿಗ್ನೇಟೆಡ್ ಅಧಿಕಾರಿಗಳಿಂದ ದೃಢೀಕರಣಗೊಂಡಿರಬೇಕು. ಸರ್ಕಾರಿ ನೌಕರರಾಗಿದ್ದಲ್ಲಿ 3ನೇ ಅನುಸೂಚಿಯನ್ನು ಡಿಡಿಓರಿಂದ ದೃಢೀಕರಿಸಿ ಮಾಹಿತಿ ಸಲ್ಲಿಸಬೇಕು.


       ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಆರು ವರ್ಷಗಳಲ್ಲಿ ಹಿಂದಿನ ದಿನಾಂಕಕ್ಕೆ ಅಂದರೆ 30-10-2017 ರ ದಿನಾಂಕದ ನಂತರದಲ್ಲಿ ಮೂರು ವರ್ಷಗಳು ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ ಕುರಿತಂತೆ ದೃಢೀಕರಣ ಪಡೆದಿರಬೇಕು. ಖಾಯಂ ಶಿಕ್ಷಕ ವೃತ್ತಿಯಲ್ಲಿರಬೇಕು.


    ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತಪಟ್ಟಿಗೆ ಸೇರ್ಪಡೆಗೊಳ್ಳಲು ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಡ್ಡಾಯವಾಗಿರುತ್ತದೆ ಎಂದರು.


        ಸಭೆಯಲ್ಲಿ ್ಲ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಅಪರ ಪೊಲೀಸ್ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ

, ಎಸಿ ಸತ್ಯನಾರಾಯಣ್, ಶಿವಮೊಗ್ಗ ತಹಶೀಲ್ದಾರ್ ಪ್ರದೀಪ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಚುನಾವಣಾ ಶಾಖೆ ಸಿಬ್ಬಂದಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Exit mobile version