ಶಿವಮೊಗ್ಗ : ಅಕ್ಟೋಬರ್ ೨೭ : : ಶಿವಮೊಗ್ಗ ಸಮೀಪದ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೪-೨೫ನೇ ಸಾಲಿನಲ್ಲಿ ೯ ಮತ್ತು ೧೧ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
೨೦೨೩-೨೪ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ ೮ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ೯ನೇ ತರಗತಿಯ ಪ್ರವೇಶಕ್ಕೆ ಜಾಲತಾಣ https://cbseitms.nic.in/2023/nvsix
ಮತ್ತು ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣhttps://cbseitems.nic.in/2023/nvsix_11
_೧೧ ಮೂಲಕ. ಅಕ್ಟೋಬರ್ ೩೦ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಸದವಕಾಶ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.