ಶಿವಮೊಗ್ಗ, ನ.೦೧:
ಪ್ರತಿನಿತ್ಯ ನಾವು ಕನ್ನಡಿಗರಾಗಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋ ಹಣ ನೆರವೇರಿಸಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವವನ್ನು ನಾಡಿನ ಎಲ್ಲರೂ ಅತ್ಯಂತ ಸಂಭ್ರಮ, ಸಂತೋಷ ದಿಂದ ಆಚರಿಸುತ್ತಿದ್ದೇವೆ. ಜಾತಿ, ಮತ, ಭಾಷೆ ಹಾಗೂ ಧರ್ಮಗಳನ್ನು ಮೀರಿದ ಎಲಾ ಕನ್ನಡಿಗರ ಹಬ್ಬವಾಗಿರುತ್ತದೆ. ಬಹುತೇಕ ಕನ್ನಡ ಪ್ರದೇಶಗಳೆಲ್ಲವೂ ಒಂದಾಗಿ ಮೈಸೂರು ರಾಜ್ಯವೆಂದು ೧೯೫೬ರ ನವೆಂಬರ್ ೦೧ ರಂದು ಉದಯವಾಯಿತು. ತದನಂತರ ಕನ್ನಡಿಗರ ಬಯಕೆಯಂತೆ ೧೯೭೩ರ ನವೆಂಬರ್ ೦೧ರಂದು ಕರ್ನಾಟಕ ಎಂದು ಮರುನಾಮಕರಣವಾಯಿತು ಎಂದರು.
ರಾಜ್ಯೋತ್ಸವ, ಭಾಷಾಭಿಮಾನ ನವೆಂ ಬರ್ ಮಾಹೆಗೆ ಸೀಮಿತವಾದರೆ ಸಾಲದು. ಪ್ರತಿನಿತ್ಯ ನಾವು ಕನ್ನಡಿಗರಾಗಿರಬೇಕು. ಕನ್ನಡ ನಮ್ಮ ಉಸಿರು, ಜೀವನಾಡಿಯಾಗಬೇಕು. ಆಂತರಿಕವಾಗಿ ಕನ್ನಡದ ಡಿಂಡಿಮ ಮೊಳಗಬೇಕು ಎಂದರು.
ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಸಾಹಿತ್ಯ ಹೊಂದಿದ್ದು, ಕನ್ನಡದ ೮ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿರುವುದು ಸಂತೋಷದ ಸಂಗತಿಯಾಗಿ ರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್.ರುದ್ರೇಗೌಡ, ಜಿಲ್ಲಾ ರಕ್ಷಣಾದಿಕಾರಿ ಜಿ.ಕೆ ಮಿಥುನ್ ಕುಮಾರ್ ಮೇಯರ್ ಶಿವಕುಮಾರ್, ಜಿ.ಪಂ. ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಸತ್ಯನಾರಾಯಣ
ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಪೊಲೀಸ್ ಅಧಿಕಾರಿಗಳು, ವಿವಿಧ ಶಾಲಾ ಮುಖ್ಯಸ್ಥರು ಮತ್ತು ಕನ್ನಡ ಸಂಘಟನೆಗಳು ಸೇರಿದಂತೆ ಹಲವರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಸೈನ್ಸ್ ಮೈದಾನದಿಂದ ಡಿಎಆರ್ ಮೈದಾನದವರೆಗೂ ಶ್ರೀ ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಿತು.