Site icon TUNGATARANGA

ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನ. 15 ರಂದು ಪದಗ್ರಹಣ


ಬಿಜೆಪಿ ರಾಜ್ಯ ಘಟಕದ ೧೧ನೇ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರು ನ. ೧೫ರಂದು ಮಲ್ಲೇಶ್ವರದಲ್ಲಿರುವ ಪಕ್ಷದ ಪ್ರಧಾನ ಕಚೇರಿ “ಜಗನ್ನಾಥ ಭವನ’ದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.


ಬುಧವಾರ ಬೆಳಗ್ಗೆ ೧೦ ಗಂಟೆಗೆ ಪಕ್ಷದ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಂದ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ವಿಜಯೇಂದ್ರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸಮಾವೇಶ ಮುಂದೂಡಿಕೆ


ನ. ೧೬ರಂದು ಅರಮನೆ ಮೈದಾ ನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದ ಬೃಹತ್ ಸಮಾವೇಶವನ್ನು ನವೆಂಬರ್ ಕೊನೆಯ ವಾರಕ್ಕೆ ಮುಂದೂ ಡಲಾಗಿದೆ.

ನ. ೩೦ರೊಳಗೆ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Exit mobile version