ಶಿವಮೊಗ್ಗ, ನ.೧೩:
ಜಿಲ್ಲೆಯಲ್ಲಿ ಅನೀಮಿಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಾರ್ವ ಜನಿಕರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯು ಅನೀಮಿಯ(ರಕ್ತಹೀನತೆ) ಮುಕ್ತ ಪೌಷ್ಠಿಕ ಜಿಲ್ಲೆ, ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಆಚರಣೆ ಹಾಗೂ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕದ ಅಂಗವಾಗಿ ಏರ್ಪಡಿ ಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆ ಯಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಸಕಾಲದಲ್ಲಿ ಅನೀಮಿಯ
ತಪಾಸಣೆ ನಡೆಸಿ, ರಕ್ತಹೀನತೆ ಯಿಂದ ಬಳಲುತ್ತಿರುವವರನ್ನು ಗುರುತಿಸಿ, ಅದರ ವಿಧಗಳಲ್ಲಿ ಸಾಮಾನ್ಯದಿಂದ ಗಂಭೀರ ಸ್ವರೂಪದ ಕಾಯಿಲೆಗಳಿಗೆ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದ ಅವರು ಈ ದಿಸೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷಿಸಿದಲ್ಲಿ ಫಲಿತಾಂಶ ನಿರಾಶಾದಾಯ ಕವಾಗಿರಲಿದೆ ಎಂದರು.
ಗರ್ಭಿಣಿ ಸ್ತ್ರೀಯರು, ಹದಿಹರೆಯದ ಗಂಡು/ಹೆಣ್ಣು ಮಕ್ಕಳು, ಎಲ್ಲಾ ಪುರುಷ/ಮಹಿಳೆಯರು, ಮಕ್ಕಳು, ಮತ್ತು ವಿಶೇಷ ವಾಗಿ ಅಪೌಷ್ಠಿಕ ಮಕ್ಕಳು ತಮ್ಮ ಆರೋಗ್ಯ ವನ್ನು ತಪಾಸಿಸಿಕೊಂಡು ಸಕಾಲಿಕ ಚಿಕಿತ್ಸೆ ಪಡೆದು, ಉತ್ತಮ ಆರೋಗ್ಯ ಹೊಂದು ವಂತೆ ಸೂಚಿಸಿದ ಅವರು, ರಕ್ತಹೀನತೆ ಯನ್ನು ನಿವಾರಿಸಲು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿ ಸ್ತ್ರೀಯರಿಗೆ ಪ್ರತಿ ತಿಂಗಳು ರಕ್ತಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆ ಮತ್ತು ಅಗತ್ಯವಿದ್ದಲ್ಲಿ ರಕ್ತ ಒದಗಿಸಲು ಕ್ರಮ ವಹಿಸಲಾಗುವುದು ಎಂದರು.
ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯ ರಿಗೆ ಸೂಕ್ತ ಪರೀಕ್ಷೆಯೊಂದಿಗೆ ಚಿಕಿತ್ಸೆ ನೀಡಿ, ಪೌಷ್ಠಿಕತೆಯ ಅರಿವು ಮೂಡಿಸಲಾಗು ವುದು. ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಮತ್ತು ಪ್ರೌಢ ಶಾಲಾ ಮತ್ತು ಅಂಗನವಾಡಿಗಳ ಅಡಿಯಲ್ಲಿ ಶಾಲೆಗಳಿಂದ ಹೊರಗುಳಿದ ವಿದ್ಯಾರ್ಥಿ ಗಳಿಗೆ ರಕ್ತಪರೀಕ್ಷೆ ನಡೆಸಿ, ಅಗತ್ಯ ಔಷಧ ಗಳನ್ನು, ಜಂತುಹುಳು ನಿವಾರಣೆ ಮಾತ್ರೆಗ ಳನ್ನು ವಿತರಿಸಲಾಗುವುದು ಎಂದರು.
ಅಲ್ಲದೇ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾ ಖೆಯ ಅಧಿಕಾರಿ-ಸಿಬ್ಬಂಧಿಗಳು ಮನೆ ಭೇಟಿ ಸಂದರ್ಭದಲ್ಲಿ ಹಾಗೂ ಆರೋಗ್ಯ ಕಾರ್ಯಕ್ರಮಗಳಲ್ಲಿ ಪೌಷ್ಠಿಕ ಆಹಾರದ ಬಗ್ಗೆ ಅರಿವು ಜಾಗೃತಿ ಮೂಡಿಸುವುದು, ವೈಯಕ್ತಿಕ ಸ್ವಚ್ಛತೆ, ನೈರ್ಮಲ್ಯ, ಕೈತೊಳೆ ಯುವ ವಿಧಾನದ ಬಗ್ಗೆ ಹೆಚ್ಚು ಆರೋಗ್ಯ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ ಎಂದ ಅವರು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಯೂ ಕೈ ತೊಳೆಯುವ ವಿಧಾನವನ್ನು ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳು ನಿರಂತರ ಅನುಸರಿಸುವಂತೆ ಕ್ರಮ ಕೈಗೊ ಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುವ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು, ಯೋಜನೆಗಳು, ಅರಿವು ಕಾರ್ಯಕ್ರಮಗಳ ಯಶಸ್ವಿ ಅನುಷ್ಟಾನಗೊಳಿಸಲು ಆರೋಗ್ಯ ಇಲಾಖಾ ಸಿಬ್ಬಂಧಿಗಳಿಗೆ ಈಗಾಗಲೇ ತರಬೇತಿಗಳನ್ನು ನೀಡಿ ಸಜ್ಜುಗೊಳಿಸಲಾ ಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳೀ, ಆರ್.ಸಿ.ಹೆಚ್. ಅಧಿಕಾರಿ ಡಾ|| ನಾಗರಾಜನಾಯ್ಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಭಂಧಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕೈತೊಳೆಯುವ ಕ,ಮದ ಬಿತ್ತಿಪತ್ರ ವನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.