ಶಿವಮೊಗ್ಗ, ನವೆಂಬರ್ 21,
ಪ್ರಧಾನಿಯವರು ದೇಶದಲ್ಲಿರುವ ಕುಶಲಕರ್ಮಿಗಳಿಗೆ ಅವರ ವೃತ್ತಿಯನ್ನು ಸದೃಢಗೊಳಿಸಲು ದಿನಾಂಕ 17-09-2023 “ಪಿ.ಎಂ.ವಿಶ್ವಕರ್ಮ” ಯೋಜನೆಯನ್ನು ಜಾರಿಗೊಳಿಸಿರುತ್ತಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಚಿನ್ನ-ಬೆಳ್ಳಿ ವೃತ್ತಿಗಾರರ ಹಿತಾರಕ್ಷಣಾ ಸಮಿತಿ ಆಶ್ರಯದಲ್ಲಿ, ಜಿಲ್ಲಾ ಕೈಗಾರಿಕಾ ಕೇಂದ್ರ ಶಿವಮೊಗ್ಗ ಹಾಗೂ ಸಾಮಾನ್ಯ ಸೇವಾ ಕೇಂದ್ರ ರವರ ಸಹಕಾರದೊಂದಿಗೆ ಇಂದು ಗಾಂಧಿ ಬಜಾರಿನ ಬಸವೇಶ್ವರ ದೇವಸ್ಥಾನ ಸಭಾಂಣದಲ್ಲಿ ಏರ್ಪಡಿಸಲಾಗಿದ್ದ ‘ಪಿ.ಎಂ.ವಿಶ್ವಕರ್ಮ’ ಯೋಜನೆಯಡಿ ಕುಶಲಕರ್ಮಿಗಳ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಯೋಜನೆಯಡಿ ಕುಶಲಕರ್ಮಿಗಳಿಗೆ “ಪಿ.ಎಂ.ವಿಶ್ವಕರ್ಮ’ ಕಾರ್ಡ್ ವಿತರಣೆ, ತರಬೇತಿ, ಉಪಕರಣಗಳ ಕಿಟ್, ಪೆÇ್ರೀತ್ಸಾಹ, ಮೊದಲ ಹಂತದಲ್ಲಿ ರೂ. 6 ಲಕ್ಷ, 2ನೇ ಹಂತದಲ್ಲಿ ರೂ.2 ಲಕ್ಷದವರೆಗಿನ ಸಾಲವನ್ನು ಬ್ಯಾಂಕಿನ ಮೂಲಕ ಕೇವಲ ಶೇಕಡ 5 ರಷ್ಟು ಬಡ್ಡಿ ದರದಲ್ಲಿ ನೀಡಲಾಗುವುದು.
ಆದ್ದರಿಂದ ಜಿಲ್ಲೆಯಲ್ಲಿ ಈ ವೃತ್ತಿಗಳಲ್ಲಿ ತೊಡಗಿರುವ ಬಡಗಿ/ಮರಗೆಲಸ ವೃತ್ತಿ ಮಾಡುವವರು, ದೋಣಿ ತಯಾರಿಸುವವರು, ಶಸ್ತ್ರ ತಯಾರಕರು, ಕಮ್ಮಾರ ವೃತ್ತಿ ಮಾಡುವವರು, ಕಲ್ಲುಕುಟಿಗ ವೃತ್ತಿ ಮಾಡುವವರು, ಚಾಪೆ-ಕಸ ಪೆÇರಕೆ ತಯಾರಕರು, ಗೊಂಬೆ ಮತ್ತು ಆಟಿಕೆ ತಯಾರಕರು (ಸಾಂಪ್ರದಾಯಿಕ), ಕ್ಷೌರಿಕ ವೃತ್ತಿ ಮಾಡುವವರು, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಹೂಮಾಲೆ ತಯಾರಕರು, ಅಗಸರು (ದೋಬಿ), ಆಭರಣ ತಯಾರಕರು, ಶಿಂಪಿಗ (ಬಟ್ಟೆ ಹೊಲೆಯುವರು), ಕುಂಬಾರ ವೃತ್ತಿ ಮಾಡುವವರು, ಮೀನು ಬಲೆ ಹೆಣೆಯುವವರು, ಶಿಲ್ಪಿ (ಮೂರ್ತಿ ಮತ್ತು ಕಲ್ಲಿನ ಕೆತ್ತನೆ), ಚಮ್ಮಾರ ಪಾದರಕ್ಷೆ ತಯಾರಕರು, ಬೀಗ ತಯಾರಕರು ಇಂತಹ ಕುಶಲಕರ್ಮಿಗಳು ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಸಿಕೊಂಡು ಈ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಲು ತಿಳಿಸಿದರು. ಪಿ.ಎಂ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳ ನೋಂದಣಿಯಲ್ಲಿ ಕರ್ನಾಟಕ ರಾಜ್ಯವು ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯವೆಂದು ತಿಳಿಸಿದರು.
ಶಾಸಕರಾದ ಎಸ್. ಎನ್. ಚನ್ನಬಸಪ್ಪನವರು ಮಾತನಾಡಿ ಇಂದು ಶಿವಮೊಗ್ಗದ ಗಾಂಧಿ ಬಜಾರ್‍ನ ಬಸವೇಶ್ವರ ದೇವಸ್ಥಾನದಲ್ಲಿ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಂತೆ ಜಿಲ್ಲೆಯಾದ್ಯಂತ ಇನ್ನೂ ಹೆಚ್ಚಿನ ಸಂಘ ಸಂಸ್ಥೆಗಳು ನೋಂದಣಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿ. ಈ ಯೋಜನೆಯಡಿ ಎಲ್ಲ ವರ್ಗದ ಕುಶಲಕರ್ಮಿಗಳು ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಚಿನ್ನ-ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷರಾದ ಎಸ್ ರಮೇಶ್, ಕಾರ್ಯದರ್ಶಿ ಸೋಮೇಶ್ ಪಿ. ಶೇಟ್, ಕಾಳಿಕಾ ಪರಮೇಶ್ವರಿ ಸೊಸೈಟಿಯ ಅಧ್ಯಕ್ಷರು, ಮಾಲತೇಶ್, ಗುರುಶೇಟ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಆರ್ ಗಣೇಶ್, ಉಪ ನಿರ್ದೇಶಕರಾದ ವೀರೇಶ ನಾಯ್ಕ ರವರು ಕಾರ್ಯಕ್ರಮದಲ್ಲಿ ಹಾಜರಿದ್ದರು.