ಬರ ಪರಿಹಾರ ಪಡೆಯಲು ಫ್ರೂಟ್ಸ್ ಐಡಿ (FRUITS ID) ಕಡ್ಡಾಯ/ ಕೂಡಲೇ ಮಾಡಿಸಲು ತಹಸಿಲ್ದಾರ್ ನಾಗರಾಜ್ ಸೂಚನೆ
admin
ಶಿವಮೊಗ್ಗ, ನ.29:
2023-24 ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲ್ಲೂಕು ತೀವ್ರ ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದ್ದು, ಮುಂಗಾರು ವೈಫಲ್ಯವಾಗಿರುವುದರಿಂದ ತಾಲ್ಲೂಕಿನಲ್ಲಿ ವಿವಿಧ ಕೃಷಿ ಹಾಗೂ ಇತರೆ ಬೆಳೆಗಳು ಹಾನಿಯಾಗಿರುವ ಕಾರಣ, ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಪರಿಹಾರ ಪಡೆಯಲು ತಾಲ್ಲೂಕಿನ ರೈತರು ತಮ್ಮ ಎಲ್ಲ ಪಹಣಿಗಳನ್ನು FRUITS ತಂತ್ರಾಂಶಕ್ಕೆ ನೋಂದಾಯಿಸಿ FID (Farmer ID) ಪಡೆಯಬೇಕಾಗಿರುತ್ತದೆ. ಇದಲ್ಲದೆ FID ಯು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, PMKISAN ಯೋಜನೆಗಳಿಗೂ ಹಾಗೂ ಕೃಷಿ, ತೋಟಗಾರಿಕೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳಲ್ಲಿ ರೈತರು ಸೌಲಭ್ಯಗಳನ್ನು ಪಡೆಯಲು ಅತ್ಯವಶ್ಯಕವಾಗಿರುತ್ತದೆ.
ಶಿವಮೊಗ್ಗ ತಾಲ್ಲೂಕಿನಲ್ಲಿ ಒಟ್ಟು 27,313 ಭೂ ಹಿಡುವಳಿದಾರರ ಬಳಿ ಒಟ್ಟು 76,044 ತಾಕುಗಳಿದ್ದು ಇದರಲ್ಲಿ ಕೇವಲ 43,738 ಸರ್ವೆ ನಂಬರ್‍ಗಳನ್ನು ಮಾತ್ರ FRUITS ತಂತ್ರಾಂಶದಲ್ಲಿ ದಾಖಲೆಗಳನ್ನು ನೋಂದಾಯಿಸಿರುತ್ತಾರೆ. ಇಲ್ಲಿಯವರೆಗೆ ಶೇ.57.51 ರಷ್ಟು ರೈತರು ಮಾತ್ರ ಪಹಣಿಗಳನ್ನು FRUITS ತಂತ್ರಾಂಶದಲ್ಲಿ ಲಿಂಕ್ ಮಾಡಿಸಿರುತ್ತಾರೆ. ಇನ್ನುಳಿದ 33,206 ತಾಕುಗಳನ್ನು ರೈತರು ತಕ್ಷಣವೇ ಈ ತಂತ್ರಾಂಶದಲ್ಲಿ ಸೇರ್ಪಡೆ ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ನಾಗರಾಜ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ರಮೇಶ್ ಎಸ್.ಟಿ ಇವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಾಗಿ ಈIಆ ಮಾಡಿಸಿಕೊಳ್ಳಲು ಹಾಗೂ ಪಹಣಿಗಳನ್ನು ಸೇರ್ಪಡೆ ಮಾಡಿಸಿಕೊಳ್ಳಲು ರೈತರು ತಮ್ಮ ಎಲ್ಲಾ ಪಹಣಿಗಳು, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತೋಟಗಾರಿಕೆ ಹಾಗೂ ಗ್ರಾಮ ಆಡಳಿತಾಧಿಕಾರಿ ಕಚೇರಿಗಳನ್ನು ಸಂಪರ್ಕಿಸುವುದು.