ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ರಾಜೀವ್ ಗಾಂಧಿ ಬಡಾವಣೆ ನಿವಾಸಿ ಪರಶುರಾಮ (೨೯) ಅಲಿಯಾಸ್ ಪರ್ಸಾ ಎಂಬುವವನಿಗೆ ಇಲ್ಲಿನ ಎರಡನೇ
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ?೧೦ ಸಾವಿರ ದಂಡ ವಿಧಿಸಿದೆ.
ಶಿಕ್ಷೆಗೊಳಗಾದ ಪರಶುರಾಮ ೨೦೨೨ರ ಮಾರ್ಚ್ ೨ರಂದು ಮಧ್ಯರಾತ್ರಿ ಶಿವಮೊಗ್ಗ ನಗರದ ಪಿಂಗಾರ ಬಾರ್ ಅಂಡ್ ರೆಸ್ಟೋರೆಂಟ್ ಎದುರು ರಸ್ತೆಯಲ್ಲಿ ಪರಿಚಿತ ಚಂದ್ರಶೇಖರ್ (೩೦)
ಎಂಬುವವನ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದನು. ಈ ಬಗ್ಗೆ ಮೃತನ ಸಹೋದರ ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ, ದೊಡ್ಡಪೇಟೆ ಠಾಣೆ ಇನ್‌ಸ್ಪೆಕ್ಟರ್ ಹರೀಶ್ ಕೆ.ಪಟೇಲ್ ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋ ಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರಿ ವಕೀಲರಾದ ಪುಷ್ಪಾ ಪ್ರಕರಣದಲ್ಲಿ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಧೀಶ ರಾದ ಬಿ.ಆರ್ ಪಲ್ಲವಿ ಆರೋಪಿ ಪರಶುರಾಮನಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.