Site icon TUNGATARANGA

ಶಿವಮೊಗ್ಗ ಜಿಲ್ಲಾ/ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

tungataranga, kannada daily, shivamogga, shimoga



ಶಿವಮೊಗ್ಗ, ಡಿ.07 :

ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ-2024ರ ಅಂಗವಾಗಿ ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ತಮ್ಮ ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ.13 ರೊಳಗೆ ಇ-ಮೇಲ್ ವಿಳಾಸ dagrshi@rediffimail.com ಅಥವಾ ಖುದ್ದಾಗಿ/ಪೋಸ್ಟ್ ಮುಖಾಂತರ ಶಿವಮೊಗ್ಗ ಜಂಟಿ ನಿರ್ದೇಶಕರ ಕಚೇರಿ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಪ್ರತಿ ಸ್ಪರ್ಧಿಗೆ ಒಂದೇ ತಿನಿಸು ಸಿಹಿ ಅಥವಾ ಖಾರ (ಸಸ್ಯಹಾರ ತಿನಿಸುಗಳು ಮಾತ್ರ) ತಯಾರಿಸುವ ಅವಕಾಶವಿರುತ್ತದೆ. ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ಡಿ.14 ರಂದು ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸರಿಯಾಗಿ 11 ಗಂಟೆಗೆ ಪ್ರದರ್ಶಿಸುವುದು. ತಯಾರಿಸಿದ ತಿನಿಸುಗಳ ಪ್ರದರ್ಶನ, ಬಳಸಿದ ಸಾಮಗ್ರಿಗಳು, ತೋರಿಕೆ, ರುಚಿ, ಸುವಾಸನೆ, ಪೌಷ್ಠಿಕತೆಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಜಿಲ್ಲಾ ಮಟ್ಟಕ್ಕೆ ಪ್ರಥಮ ಬಹುಮಾನವಾಗಿ ಖಾರ ಅಥವಾ ಸಿಹಿ ತಿನಿಸಿಗೆ ತಲಾ ರೂ.5000/- ಬಹುಮಾನವಿರುತ್ತದೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಡಿ23 ರಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು, ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಸಿದ್ಧರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 8277932643 ೮೨೭೭೯೩೨೬೪೩ ನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version