ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ | ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಪ್ರಕರಣ
ಶಿವಮೊಗ್ಗ: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪೊಲೀಸರ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಅನುಮಾನಾಸ್ಪದವಾಗಿ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ನೂರಾರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಗುರುವಾರ ಸಂಜೆ ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಶಿಕಾರಿಪುರಗಳಲ್ಲಿ ಪೊಲೀಸರು ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗದ ಮಂಜುನಾಥ ಬಡಾವಣೆ, ಎಎ ಕಾಲೋನಿ, ರೈಲ್ವೆ ಸ್ಟೇಷನ್, ಸೋಮಿನಕೊಪ್ಪ, ಭದ್ರಾವತಿಯ ವಿದ್ಯಾ ಕಾಲೋನಿ, ತಮ್ಮಣ್ಣ ಕಾಲೋನಿ, ಸಾಗರದ ರಾಮನಗರ, ಇಕ್ಕೇರಿ ವೃತ್ತ, ಜೋಗ ಬಜಾರ್, ಯಡೇಹಳ್ಳಿ, ಶಿಕಾರಿಪುರ ಪೊಲೀಸ್ ಉಪ ವಿಭಾಗ ವ್ಯಾಪ್ತಿಯ ಸೊರಬ ತಾಲೂಕಿನ ಆನವಟ್ಟಿ ಬಸ್ ನಿಲ್ದಾಣ, ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದ ಹೊರವಲಯದ ಪ್ರದೇಶಗಳಲ್ಲಿ ಆಯಾ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರು, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ಪೂರ್ವಾಪರ ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ.
ಒಟ್ಟಾರೆ 203 ಲಘು ಪ್ರಕರಣ, ಮೋಟಾರು ವಾಹನ ಕಾಯ್ದೆಯಡಿ 35 ಹಾಗೂ ಕೋಟ್ಪಾ ಕಾಯ್ದೆಯಡಿಯಲ್ಲಿ 10 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ನಿಮ್ಮೂರಿಗೆ ನೀವೆ ವರದಿಗಾರರಾಗಿ.
ನಿಮ್ಮ ಸರ ಹದ್ದಿನಲ್ಲಿ ನಡೆಯುವ ಅಕ್ರಮ, ಸ್ವಚ್ಛತೆ, ನಿಮ್ಮೂರಿನ ಸಮಸ್ಯೆಗಳನ್ನು ನಮ್ಮಲ್ಲಿ ಪ್ರಕಟಿಸಲಾಗುವುದು. ಫೋಟೊ ಸಮೇತ ವಿವರ ಮಾಹಿತಿಗಳನ್ನು 9448256183, 7483162573 ಗೆ ಕಳುಹಿಸಿ