ಬೆಳಗಾವಿಯ ಗ್ರಾಮಾಂತ ರದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ವನ್ನು ಖಂಡಿಸಿ, ಶಿವಮೊಗ್ಗ ಬಿಜೆಪಿ ಮಹಿಳಾ ಮೋರ್ಚಾದಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರತಿ sಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತ ನಾಡಿ, ಬೆಳಗಾವಿಯಲ್ಲಿ ಕ್ಲುಲಕ ಕಾರಣಕ್ಕೆ , ಪ್ರೇಮಿಗಳಿಬ್ಬರು ಪ್ರೀತಿಸಿ ಮನೆಬಿಟ್ಟು ಹೋಗಿದ್ದಕ್ಕೆ ಹುಡುಗನ ತಾಯಿ ಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ, ಹಲ್ಲೆ ಮಾಡಿ ರುವುದು. ಇಡೀ ನಾಗರೀಕ ಸಮಾಜ ತಲೆತಗ್ಗಿ ಸುವ ಘಟನೆಯಾಗಿದೆ.
ನಾವು ಯಾವ ಸಮಾಜದಲ್ಲಿ ಇದ್ದೇವೆ ಎನ್ನುವುದು ಪ್ರಶ್ನೇ ಕಾಡುತ್ತಿದೆ. ಇಡೀ ರಾಜ್ಯದ ಜನ ತಲೆತಗ್ಗಿಸುವ ಘಟನೆ ಇದ್ದಾಗಿದ್ದು, ಕೇಂದ್ರದಿಂದ ಘಟನೆಯ ಸತ್ಯ ಪರಿಶೀಲನೆಗೆ ಸತ್ಯಶೋಧನ ತಂಡ ಬಂದಿದೆ. ಮುಖ್ಯಮಂತ್ರಿಗಳಿಗೂ ಅಕ್ಕ ತಂಗಿಯರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಏನು ಬೇಕಾದರೂ ಮಾಡಬಹುದು ಎಂಬ ಸ್ಥಿತಿಯಲ್ಲಿ ಕೀಡಿಗೇಡಿ ಗಳಿದ್ದಾರೆ. .ಶಾಸಕ ಚೆನ್ನಬಸಪ್ಪ ಮಾತನಾಡಿ, ಅಧಿವೇಶನ ಸಂದರ್ಭ ದಲ್ಲಿ ಬೆಳಗಾವಿಯ ಈ ಅಮಾನುಷ ಘಟನೆಯ ಬಗ್ಗೆ ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಲಿಲ್ಲ. ಅಲ್ಲೇ ಅಧಿವೇಶನ ನಡೆಯುತ್ತಿರು ವಾಗಲೇ ಈ ಘಟನೆ ನಡೆದಿದ್ದು, ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಬೇಕಿತ್ತು. ಅದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ರವರ ಕ್ಷೇತ್ರವಾಗಿದ್ದು, ಅವರಾದರೂ ಸದನದಲ್ಲಿ ಈ ವಿಚಾರವನ್ನೆತ್ತಿ ಖಂಡನೆ ವ್ಯಕ್ತಪಡಿಸಬೇಕಿತ್ತು.
ಸಚಿವರು ಕೂಡ ಚಕಾರ ಎತ್ತಲಿಲ್ಲ. ಲಜ್ಜೆಗೆಟ್ಟ ಭಂಡ ಸರ್ಕಾರವಿದು. ಮಹಿಳೆಯರ ಮತ್ತು ಸಂಸ್ಕೃತಿಯ ರಕ್ಷಣೆ ಮಾಡದ ಇಂತಹ ಸರ್ಕಾರ ಇರಬಾರದು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅಂತ ರಾಷ್ಡ್ರೀ ಯ ಷಡ್ಯಂತ್ರಕ್ಕೆ ಬಲಿಯಾದ ಕೆಲವರಿಂದ ಮಣಿಪು ರದಲಿ ಇಂತಹ ಘಟನೆ ನಡೆದಾಗ, ಬೊಬ್ಬಿರಿದ ಶಕ್ತಿಗಳು ಈಗ ಸುಮ್ಮನಾಗಿದೆ
. ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಸುನೀತ ಅಣ್ಣಪ್ಪ, ರಶ್ಮಿ ಶ್ರೀನಿವಾಸ್, ಲಕ್ಷ್ಮೀ ಶಂಕರ್ ನಾಯಕ್, ಸುವರ್ಣ ಶಂಕರ್, ಅನಿತಾ ರವಿಶಂಕರ್, ಆರತಿ ಅ.ಮಾ.ಪ್ರಕಾಶ್, ನಗರಾಧ್ಯಕ್ಷ ಜಗದೀಶ್, ಎನ್.ಡಿ.ಸತೀಶ್, ಜ್ಞಾನೇಶ್ವರ್ ಮತ್ತಿತರರು ಇದ್ದರು