Site icon TUNGATARANGA

ಶಾಂತಿನಗರದಲ್ಲಿ ನಡೆದ ಘಟನೆ ಇನ್ನೂ ಮುಂದೆ ಸಂಭವಿಸದಂತೆ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಿ: ಎಸ್ಪಿ ಮಿಥುನ್‌ಕುಮಾರ್ ಹೇಳಿಕೆ

ಶಾಂತಿನಗರದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ನಡೆದ ದುರ್ಘಟನೆ ಇನ್ನೂ ಮುಂದೆ ಸಂಭವಿಸದಂತೆ ಸ್ಥಳೀಯ ಮುಖಂಡರು ಮುತುವರ್ಜಿ ವಹಿಸಬೇಕು. ಯಾರೋ ಮಾಡುವ ತಪ್ಪಿಗೆ ಎಲ್ಲರೂ ಜವಬ್ದಾರರಾಗುತ್ತಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಹೇಳಿದ್ದಾರೆ.

https://tungataranga.com/?p=26089
ಮಾತೆಯರಿಂದ ತುಂಗಾ ತರಂಗ ಪತ್ರಿಕೆಯ “ತುಂಗೆಯ ವರುಣಾಂತರಂಗ” ವಿಶೇಷಾಂಕ ಬಿಡುಗಡೆ.., ಹೇಗಿತ್ತು ಗೊತ್ತಾ ನಿಮ್ ಪತ್ರಿಕೆಯ ಸರಳ ಸುಂದರ ಹಬ್ಬ ಲಿಂಕ್ ಬಳಸಿ ಓದಿ


ಶಾಂತಿನಗರದಲ್ಲಿ ಶಿವಮೊಗ್ಗ ಜಿಲ್ಲಾ ಪೋಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಶಾಂತಿನಗರದಲ್ಲಿ ಅನೇಕ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ನಮ್ಮ ಗಮನಕ್ಕೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಆದರೆ ಕ್ಲುಲಕ ಕಾರಣಕ್ಕಾಗಿ ಸಮುದಾಯಗಳ ನಡುವೆ ಘರ್ಷಣೆ ಉಂಟಾದರೆ ಪೊಲೀಸರು ತಮ್ಮದೇ ಆದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಅನೇಕ ಬಡ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಸೆಕ್ಷನ್ ಹಾಕಿದಾಗ ಶಾಲಾ-ಕಾಲೇಜು ಮಕ್ಕಳಿಗೆ, ವೃದ್ಧರಿಗೆ, ರೋಗಿಗಳಿಗೆ ಎಲ್ಲರಿಗೂ ಕೂಡ ಸಮಸ್ಯೆಯಾಗುತ್ತದೆ. ಪೊಲೀಸರು ಕೂಡ ಮನುಷ್ಯರೇ ತಮ್ಮ ಮನೆ ಮಠ ಬಿಟ್ಟು ಶಾಂತಿ ಸ್ಥಾಪನೆಗಾಗಿ ವಾರಗಟ್ಟಲೆ ಇಲ್ಲೆ ಕಾಯಬೇಕಾಗುತ್ತದೆ. ಘರ್ಷಣೆಯ ಪರಿಣಾಮ ಎಲ್ಲರಿಗೂ ಅರಿವಾಗಿದೆ. ಅನೇಕ ಸ್ಥಳೀಯ ಹಿರಿಯ

ನಿವಾಸಿಗಳು ಇನ್ನೂ ಮುಂದೆ ಈ ರೀತಿ ಹಾಗದಂತೆ ನೋಡಿಕೊ ಳ್ಳುವ ಭರವಸೆ ನೀಡಿದ್ದಾರೆ. ದೇವಸ್ಥಾನ ಸಮಿತಿ, ಮಸೀದಿ ಸಮಿತಿಯ ಹಿರಿಯರು ಮತ್ತು ನಾಗರಿಕರು ಸೇರಿ ಶಾಂತಿ ಪಡೆಯನ್ನು ಕಟ್ಟಿದ್ದಾರೆ. ಇಡೀ ರಾಗಿಗುಡ್ಡ ಮತ್ತು ಶಾಂತಿನಗರದಲ್ಲಿ ನಾವೆಲ್ಲರೂ ಸೇರಿ ಸ್ವಚ್ಛತ ಅಭಿಯಾನ ಮಾಡೋಣ. ಪ್ರತಿ ತಿಂಗಳಿಗೊಮ್ಮೆ ಸಭೆ ಸೇರಿ ಜಾತಿ, ಮತ ಭೇದ ಮರೆತು ಒಂದಾಗಿ ಅವಲೋಕನ ಮಾಡೋಣ. ಯುವ ಶಕ್ತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡೋಣ ಎಂದರು.


ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾತನಾಡಿ ಈ ಪ್ರದೇಶದಲ್ಲಿ ಅನೇಕ ದೂರುಗಳಿವೆ. ಒಳಚರಂಡಿ, ಕುಡಿಯುವ ನೀರು, ಹಕ್ಕುಪತ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಬಸ್, ಬೀದಿ ದೀಪ ವ್ಯವಸ್ಥೆ, ಬೇಕೆಂಬುವುದು ಅನೇಕ ವರ್ಷದ ಬೇಡಿಕೆಎಲ್ಲವನ್ನೂ ಕೂಡ ಬಗೆಹರಿಸಲಾಗುವುದು. ಕೆಲವರು ಪ್ರತಿಷ್ಠೆಗಾಗಿ ಅನಾವಶ್ಯಕವಾಗಿ, ಅಹಿತಕರ ವಾತವರಣ ಸೃಷ್ಟಿ ಮಾಡುತ್ತಾರೆ. ಎಲ್ಲವನ್ನು ಮರೆತು ಇನ್ನು ಮುಂದೆ ಈ ರೀತಿಯ ಆಗಾದಾಗೆ ಕ್ರಮ ವಹಿಸೋಣ ಎಂದರು.


ಶಾಂತಿನಗರದ ಮಾಜಿ ಕಾರ್ಪರೇಟರ್ ಧೀರರಾಜ್ ಹೊನ್ನಾವಿಲೆ, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಡಿ.ವೈ.ಎಸ್.ಪಿ. ಸುರೇಶ್, ಕಂದಾಯಾಧಿಕಾರಿ ನಾಗೇಂದ್ರ, ಪಿ.ಎಸ್.ಐ. ಸತ್ಯನಾರಾಯಣ್, ಸೈಮನ್ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Exit mobile version