ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ
ಶಿವಮೊಗ್ಗ, ಡಿಸೆಂಬರ್ ೨೬, : ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. ೨೭ ರಿಂದ ಡಿ. ೨೯ ರವರೆಗೆ ಬೆಳಗ್ಗೆ ೯.೦೦ ರಿಂದ ಸಂಜೆ ೫.೦೦ ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಿದೆ.
ಈ ಕ್ಯಾಂಪ್‌ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದು, ಗೃಹಲಕ್ಷ್ಮೀ ಯೋಜನೆಗೆ
ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‌ಡೆಟ್ ಮಾಡುವುದು, ಗೃಹಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.
ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಓ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.