ಶಿವಮೊಗ್ಗ,ಡಿ.೨೯:ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ ಅವರ ನೇತೃತ್ವದಲ್ಲಿ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಶಿವಮೊಗ್ಗ ನಗರದ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಲವು ಸೂಚನೆಗಳನ್ನು ನೀಡಲಾಯಿತು.
ಹೊಸ ವರ್ಷ ಆಚರಣೆ ಸಮಾರಂಭವನ್ನು ಆದಷ್ಟೂ ಶಿಸ್ತಿನಿಂದ, ಮಿತಿಯ ಒಳಗೆ ಆಚರಿಸಬೇಕು. ಮತ್ತು ಸಂಭ್ರಮಾಚರಣೆಯನ್ನು ಬೆಳಗಿನ ಜಾವ ೦೧:೦೦ ಗಂಟೆಯ ಒಳಗಾಗಿ ಮುಕ್ತಾಯಗೊಳಿಸಬೇಕು.
ವಾಹನ ಸವಾರರು ಮದ್ಯಪಾನ ಮಾಡಬಾರದು.
ಘನ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಹೊರಾಂಗಣದ ಸಂಭ್ರಮಾಚರಣೆಗಳಲ್ಲಿ ರಾತ್ರಿ ೧೦ ಗಂಟೆಯ ವರೆಗೆ ನಿಗದಿ ಪಡಿಸಿದ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂಗಳನ್ನು ಬಳಸುವುದು ಮತ್ತು ರಾತ್ರಿ ೧೦ ಗಂಟೆಯ ನಂತರ ಕೇವಲ ಒಳಾಂಗಣ ಸಂಭ್ರಮಾಚರಣೆಗಳಲ್ಲಿ ಮಾತ್ರ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂಗಳನ್ನು ಬಳಸಬೇಕು.
ಹೊಸ ವರ್ಷ ಆಚರಣೆ ಸಮಾರಂಭದ ಆಯೋಜಕರು, ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರುವುದು, ಕಾನೂನುನಿನ ಚೌಕಟ್ಟಿನ ಒಳಗೆ ನಡೆಯುವ ಕಾರ್ಯಕ್ರಮಗಳಿಗೆ ಯಾವುದೇ ಅಭ್ಯಂತರವಿರುದಿಲ್ಲ ಮತ್ತು ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.
ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವವರ ಸುರಕ್ಷತೆಯ ದೃಷ್ಠಿಯಿಂದ, ಅಪಾಯವಿರುವ ಸ್ಥಳಗಳಾದ ಮೇಲಂತಸ್ತು (ಟಾಪ್ ರೂಫ್) ಗಳಲ್ಲಿ ಮತ್ತು ಎತ್ತರವಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡವುದು ಸೂಕ್ತವಿರುವುದಿಲ್ಲ. ಆದ್ದರಿಂದ ಎಲ್ಲಾ ಸುರಕ್ಷತಾ ನಿಯಮಗಳನ್ನು ಮತ್ತು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ, ಸುರಕ್ಷಿತವಾದ ಸ್ಥಳಗಳಲ್ಲಿಯೇ ಕಾರ್ಯಕ್ರಮವನ್ನು
ಆಯೋಜನೆ ಮಾಡುವುದು.
ಸಾರ್ವಜನಿಕರ ಹಿತ ದೃಷ್ಠಿಯಿಂದ, ಸಂಭ್ರಮಾಚರಣೆಯನ್ನು ಕಾರ್ಯಕ್ರಮ ಆಯೋಜಿಸಿರುವ ಸ್ಥಳದ ಹೊರಗಡೆ, ರಸ್ತೆಬದಿಗಳಲ್ಲಿ ಮಾಡದೇ, ನಿಗದೀಪಡಿಸಿರುವ ಸ್ಥಳದ ಒಳಗಡೆಯೇ ಮಾಡುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಆಯೋಜಕರ ಜವಬ್ದಾರಿಯಾಗಿರುತ್ತದೆ.
ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: ೯೪೮೦೮೦೩೩೦೦ / ೦೮೧೮೨-೨೬೧೪೧೩ ಅಥವಾ ತುರ್ತು ಸಹಾಯವಾಣಿ ೧೧೨ ಗೆ ಕರೆ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಬಾಲರಾಜ್, ಡಿವೈಎಸ್ಪಿ, ಶಿವಮೊಗ್ಗ ಎ ಉಪ ವಿಭಾಗ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.