ಶಿವಮೊಗ್ಗ: ಆಗುಂಬೆ ಘಾಟಿ ರಸ್ತೆಯಲ್ಲಿ ಜೂನ್ 15ರಿಂದ ಅಕ್ಟೋಬರ್ 15ರವರೆಗೆ
ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ನೀಡಿದ್ದಾರೆ.
ಆಗುಂಬೆ ಭಾಗದಲ್ಲಿ ಅತಿಯಾಗಿ ಸುರಿಯುವ ಮಳೆಯಿಂದ ಘಾಟಿ ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಈ ಸಮಯದಲ್ಲಿ12 ಟನ್ ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳಿಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಸಂಚರಿಸುವಂತಿಲ್ಲ. ಈ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಎರಡು ಪರ್ಯಾಯ ಮಾರ್ಗ ಸೂಚಿಸಿದ್ದು, ಶಿವಮೊಗ, ತೀರ್ಥಹಳ್ಳಿ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ, ಮಂಗಳೂರ ಮಾರ್ಗವಾಗಿ ಸಂಚರಿಸಬಹುದು. ಅಲ್ಲದೆ ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ, ಮಂಗಳೂರು ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದ್ದಾರೆ.