Site icon TUNGATARANGA

ಕರ ಸೇವೆಯಲ್ಲಿ ಪಾಲ್ಗೊಂಡಿದ್ದವರ ಬಂಧನ ಖಂಡಿಸಿ /ಜ. 04 ರಂದು ಬಿಜೆಪಿಯಿಂದ ಪ್ರತಿಭಟನೆ

ಶಿವಮೊಗ್ಗ: ಅಯೋಧ್ಯಯಲ್ಲಿ ನಡೆದಿದ್ದ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ರಾಮ ಭಕ್ತರ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜನವರಿ ೦೪ ರಂದು ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ಎಸ್.ಎನ್.ಚನ್ನಬಸಪ್ಪ, ರುದ್ರೇಗೌಡರು, ಡಿ.ಎಸ್.ಅರುಣ್, ಜಿಲ್ಲಾ ಬಿಜೆಪಿ ಅಧಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವಾರು ಪ್ರಮುಖರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು ನಗರ ಬಿಜೆಪಿ ಅಧಕ್ಷ ಜಗದೀಶ್ ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಅಯೋಧ ಕರ ಸೇವೆಯಲ್ಲಿ ಪಾಲ್ಗೊಂಡ ಹುಬ್ಬಳ್ಳಿಯ ಶ್ರೀಕಾಂತ ಪೂಜಾರಿ ಅವರನ್ನು ರಾಜ್ಯದ ಪೊಲೀಸರು ಬಂಸಿದ್ದಾರೆ. ಇದರ ವಿರುದ್ಧ ಪ್ರತಿಭಟನೆಗೆ ಪಕ್ಷದ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಅವರು ಕರೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಇಡೀ ದೇಶಾದ್ಯಂತ ರಾಮಮಂದಿರ ನಿರ್ಮಾಣದ ಸಂತಸ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗೆ ಮಂತ್ರಾಕ್ಷತೆ ತಲುಪಿಸುವ ಕಾರ್ಯ ಭರದಿಂದ ಸಾಗಿದೆ. ಆದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆ ಸಂತಸವನ್ನು ಕಸಿದುಕೊಳ್ಳುವ ಹುನಾರ ನಡೆಸಿದೆ. ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್, ಹಿಂದೂ ಕಾರ್ಯಕರ್ತರ ಮನೋಸ್ಥೈರ್ಯ ಕುಗ್ಗಿಸಲು ಕರ ಸೇವಕರ ಬಂಧನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಅಲ್ಪಸಂಖ್ಯಾತರ ಓಲೈಕೆಗಾಗಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಲ್ಲಿನ ೧೦,೦೦೦ ಕೋಟಿ ಅನುದಾನವನ್ನು ಕೊಡುವುದಾಗಿ ಮುಖ್ಯಮಂತ್ರಿಗಳೇ ಘೋಷಣೆ ಮಾಡುತ್ತಾರೆ. ಹಿಜಾಬ್ ಧರಿಸಲು ಅವಕಾಶ ಕೊಡುವುದಾಗಿ ಹೇಳುತ್ತಾರೆ. ಅಲ್ಪಸಂಖ್ಯಾತರ ಓಲೈಕೆ ಮತ್ತು ಖುಷಿಪಡಿಸಲು ರಾಜಕಾರಣ ಮಾಡುವುದು ಖಂಡನೀಯ ಎಂದರು.


ಸ್ವಾತಂತ್ಯ ಬಂದಾಗಿನಿಂದಲೂ ಕಾಂಗ್ರೆಸ್ ದೇಶದಲ್ಲಿ ತುಷ್ಟೀಕರಣ ನೀತಿಯನ್ನೇ ಅನುಸರಿಸಿಕೊಂಡು ಬಂದಿದೆ. ಮುಸ್ಲಿಮರನ್ನು ಸಂತೋಷ ಪಡಿಸುವುದೇ ಇವರ ಏಕಮಾತ್ರ ಉzಶವಾಗಿದೆ. ಅದಕ್ಕಾಗಿ ಬಾಬರ್ ಸಂತತಿಯವರಂತೆ ನಡೆದುಕೊಳ್ಳುತ್ತಾರೆ. ಮತ್ತೊಂದೆಡೆ ತಮ್ಮ ಸರ್ಕಾರದಲ್ಲಿನ ಉಪಮುಖ್ಯಮಂತ್ರಿಗಳ ಮೇಲಿನ ತನಿಖೆ ವಾಪಾಸ್ ಪಡೆಯಲು ನಿ‘ರಿಸುತ್ತಾರೆ. ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ದಾಳಿ ಮಾಡಿರುವ ಆರೋಪಿಗಳ ಮೇಲಿನ ಪ್ರಕರಣ ವಾಪಾಸ್ ಪಡೆಯಲು ಮುಂದಾಗುತ್ತಾರೆ ಎಂದು ಟೀಕಿಸಿದರು.
ನಾಳಿನ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್. ಚನ್ನಬಸಪ್ಪ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ಜಿಲ್ಲಾ ಬಿಜೆಪಿಯ ಪ್ರಮುಖರ್ ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಪ್ರಮುಖರಾದ ಮಾಲತೇಶ್, ಬಾಲು, ಪ್ರದೀಪ್, ಮಾಜಿ ಸೂಡಾ ಅಧ್ಯಕ್ಷ ನಾಗರಾಜ್ ಇದ್ದರು

Exit mobile version