Site icon TUNGATARANGA

ಶೀಘ್ರ ಭದ್ರಾ ಕಾಲುವೆಗಳ ಕಾಮಗಾರಿ ಮುಗಿಸಲು ಪವಿತ್ರ ರಾಮಯ್ಯ ಸೂಚನೆ

ಶಿವಮೊಗ್ಗ: ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಮುಗಿಸುವಂತೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು
ಅವರು ಪ್ರಾಧಿಕಾರದ ಕಛೇರಿಯಲ್ಲಿ ಕಾಡ ಪ್ರಾಧಿಕಾರ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದರು.
ಕಾಲುವೆಗಳಲ್ಲಿ ಈಗಾಗಲೇ ಪ್ರಾರಂಭಿಸಿರುವ ಕಾಮಗಾರಿಗಳ ವಿವರಗಳು ಹಾಗೂ ಅವುಗಳು ಮುಗಿಯುವ ಹಂತ ಹಾಗೂ ಕಾಲುವೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಾರಂಭಿಸಬೇಕಿರುವ ಕಾಮಗಾರಿಗಳ ಬಗ್ಗೆ ಹಾಗೂ ಕಾಮಗಾರಿಗಳ ಮುಕ್ತಾಯದ ಅವಧಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರಾಧಿಕಾರದ ವ್ಯಾಪ್ತಿಯ ಕಾಲುವೆಗಳಲ್ಲಿ ಸಿಲ್ಟ್(ಹೂಳು) ತುಂಬಿಕೊಂಡಿದ್ದು, ಯಾವ ಭಾಗಗಳಲ್ಲಿ ಸಮಸ್ಯೆಯಾಗಿದೆ. ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಸಲು ಇರುವ ಇನ್ನಿತರ ನ್ಯೂನತೆಗಳು ಮತ್ತು ಅವುಗಳನ್ನು ಸರಿಪಡಿಸಲು ತಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿಗಳಲ್ಲಿ ಯಾವುದೇ ರೀತಿಯಲ್ಲಿ ಲೋಪದೋಷ ಕಾಣದೆ ಗುಣಮಟ್ಟ ಕಾಪಾಡಿಕೊಳ್ಳಬೇಕು. ಕಾಲುವೆಗಳಲ್ಲಿ ತುಂಬಿ ಕೊಂಡಿರುವ ಹೂಳನ್ನು ತೆಗೆಸಿಕೊಡುವಂತೆ ಅದರಿಂದ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಈಗಾಗಲೇ ರೈತರಿಂದ ಸಾಕಷ್ಟು ಅರ್ಜಿಗಳು ಕಚೇರಿಗೆ ಬಂದಿವೆ ಎಂದರು.
ಈಗಾಗಲೇ ಜಲಾಶಯದಿಂದ ಕಾಲುವೆಗಳಿಗೆ ಹರಿಸುವ ನೀರು ನಿಲ್ಲಿಸಿದ್ದು, ಈ ಬಿಡುವಿನ ಅವಧಿಯಲ್ಲಿ ಪ್ರಾಧಿಕಾರದ ವ್ಯಾಪ್ತಿಯ ಕಾಲುವೆಗಳಲ್ಲಿ ತುಂಬಿಕೊಂಡಿರುವ ಹೂಳನ್ನು ನೀರಾವರಿ ಇಲಾಖೆಯ ವತಿಯಿಂದ ತೆಗೆಸಿ, ಅಚ್ಚುಕಟ್ಟು ವ್ಯಾಪ್ತಿಯ ಕೊನೆಯ ಭಾಗದ ರೈತರಿಗೆ ನೀರು ಹರಿಯುವಂತೆ ಮಾಡಿ ಅನುಕೂಲ ಮಾಡಿಕೊಡುವಂತೆ ಖಡಕ್ ಸೂಚನೆ ನೀಡಿದರು.
ಈ ಸಭೆಯಲ್ಲಿ ಕಾಡ ಉಪ ಆಡಳಿತಾಧಿಕಾರಿ ಪಾಂಡು, ಕಾಡ ಅಧೀಕ್ಷಕ ಎಂಜಿನಿಯರ್ ಗುರು ಸ್ವಾಮಿ, ಕಾಡ ಕಾರ್ಯಪಾಲಕ ಇಂಜಿನಿಯರ್ ಮೂಡಲ ಗಿರಿಯಪ್ಪ ಅವರು, ಭದ್ರಾ ಯೋಜನಾ ವೃತ್ತದ ಕಾರ್ಯಪಾಲಕ ಇಂಜಿನಿಯರ್ ಚಂದ್ರಹಾಸ್ ಹಾಗೂ ಅನೇಕ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version