Site icon TUNGATARANGA

ನೋಂದಾಯಿತ ಆಟೋರಿಕ್ಷಾಗಳಿಗೆ ಪರವಾನಿಗೆ ನೀಡಿ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ


ಶಿವಮೊಗ್ಗ, ಡಿ.೦೪:
ಹೊಸದಾಗಿ ಖರೀದಿಸಿ ನೋಂದ ಣಿಯಾದ ಆಟೋರಿಕ್ಷಾಗಳಿಗೆ ಪರವಾನಿಗೆ ಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗ ಣದಲ್ಲಿ ಆಟೋರಿಕ್ಷಾ ಪರವಾನಗಿ ನೀಡುವ ಕುರಿತು ಏರ್ಪಡಿಸಲಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದಲ್ಲಿ ನೋಂದಾಯಿತ ೩೦೪ ಸಂಖ್ಯೆಯ ಆಟೋರಿಕ್ಷಾಗಳಿಗೆ ಪರವಾನಗಿ ಬಾಕಿ ಇದ್ದು ಇವುಗಳಿಗೆ ಪರವಾನಗಿ ನೀಡುವಂತೆ ಸೂಚಿಸಿದರು. ಹಾಗೂ ನಿಯ ಮದನ್ವಯ ೧೫ ವರ್ಷಗಳಿಗೂ ಮೇಲ್ಪಟ್ಟ ವಾಹನಗಳ ನವೀಕರಣ ಸಾಧ್ಯವಿಲ್ಲವೆಂದು ತಿಳಿಸಿದರು.


ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಬಿ.ಶಂಕರಪ್ಪ ಮಾತನಾಡಿ, ನಗರದಲ್ಲಿ ಸುಮಾರು ೪ ಸಾವಿರ ಆಟೋ ಗಳು ಚಾಲನೆಯಲ್ಲಿವೆ. ಸುಮಾರು ೨ ಸಾವಿರ ಆಟೋಗಳ ನವೀಕರಣ ಬಾಕಿ ಇದೆ.


ಆಟೋ ಚಾಲಕರ ಸಂಘದ ಪದಾಧಿ ಕಾರಿಗಳು ಮಾತನಾಡಿ, ನಗರದಲ್ಲಿ ಕೇವಲ ೩೦೪ ಅಲ್ಲ, ಸುಮಾರು ೧೨೦೦ ನೋಂದಾ ಯಿತ ಆಟೋಗಳಿದ್ದು ಅವುಗಳಿಗೆಲ್ಲ ಪರವಾನಗಿ ನೀಡಬೇಕು. ಹಾಗೂ ಶೋ ರೂಮಿನವರು ಆಟೋ ಖರೀದಿ ವೇಳೆ ಪರವಾನಗಿ ಕೊಡಿಸುತ್ತೇವೆಂದು ೩೦ ರಿಂದ ೪೦ ಸಾವಿರದವರೆಗೆ ಹಣ ವಸೂಲಿ ಮಾಡುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಹಾಗೂ ಆಟೋ ಚಾಲನೆ ವ್ಯಾಪ್ತಿಯನ್ನು ೨೦ ಕಿ.ಮೀ ವರೆಗೆ ವಿಸ್ತರಿಸಬೇಕೆಂದು ಮನವಿ ಮಾಡಿದರು.


ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಆನ್‌ಲೈನ್‌ನಲ್ಲಿ ಪರವಾನಗಿ ಬಾಕಿ ಕಡಿಮೆ ತೋರಿಸುತ್ತಿದ್ದು, ಈ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿ ಯಲ್ಲಿ ಮಾತ್ರ ಪರವಾನಗಿ ನೀಡಲಾಗು ವುದು. ಹಾಗೂ ಪರವಾನಗಿ ಪಡೆಯದ ಆಟೋಗಳ ನೋಂದಣಿ ನಿಲ್ಲಿಸುವಂತೆ ತಿಳಿಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತ ನಾಡಿ, ನಗರದಲ್ಲಿ ಹೊಸದಾಗಿ ಆಟೋರಿ ಕ್ಷಾಗಳನ್ನು ಖರೀದಿಸಿ ನೋಂದಣಿ ಮಾಡಿ ಸಿಕೊಂಡವರಿಗೆ ಪರವಾನಿಗಿ ನೀಡಬೇಕು. ಹಾಗೂ ನವೀಕರಣಕ್ಕೆ ಅರ್ಹರಾದವರಿಗೆ ನವೀಕರಣ ಮಾಡಬೇಕೆಂದರು ತಿಳಿಸಿದರು.


ಆಟೋ ಚಾಲಕರು ಮಾತನಾಡಿ ಆಟೋಗಳಿಗೆ ರೆಟ್ರೊ ಎಲೆಕ್ಟ್ರಿಕ್ ಸ್ಟಿಕ್ಕರ್ ಅಳವಡಿಕೆ ಮಾಡಬೇಕೆಂಬ ನಿಯಮವನ್ನು ತರಲಾಗಿದೆ. ಇದರಿಂದ ಚಾಲಕರಿಗೆ ರೂ. ೨೦೦೦ ವರೆಗೆ ಖರ್ಚು ಬರುತ್ತದೆ. ಹಾಗೂ ಎಫ್‌ಸಿ ವೇಳೆ ಇದರ ಬಿಲ್ಲನ್ನು ಕೇಳಲಾಗು ವುದರಿಂದ ತೊಂದರೆ ಆಗುತ್ತಿದ್ದು, ಸ್ಟಿಕ್ಕರ‍್ನಿಂದ ವಿನಾಯಿತಿ ಕೋರಿದರು.


ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸ್ಟಿಕ್ಕರ್ ಹಾಕಿಸುವುದು ಒಳ್ಳೆಯದು. ಸ್ಟಿಕ್ಕರ್ ಅಳವ ಡಿಕೆ ಕುರಿತಾದ ಕೇಂದ್ರ ಮತ್ತು ರಾಜ್ಯ ಸರ್ಕಾ ರಗಳ ಆದೇಶದಲ್ಲಿನ ಗೊಂದಲದ ಬಗ್ಗೆ ಸಂಬಂಧಿಸಿದ ಆಯುಕ್ತರಿಗೆ ಪತ್ರ ಬರೆದು ಸ್ಪಷ್ಪನೆ ಪಡೆಯಲಾಗುವುದು. ಹಳೇ ಸ್ಟಿಕ್ಕರ್ ಇರುವವರು ಹೊಸದಾಗಿ ಹಾಕಿಸುವ ಅವಶ್ಯಕತೆ ಇಲ್ಲವೆಂದರು. ನಾಗರೀಕರಾದ ಡಾ.ಶ್ರೀನಿವಾಸನ್‌ರವರು ಮಾತನಾಡಿ, ರೈಲ್ವೇ ನಿಲ್ದಾಣದಲ್ಲಿ ಆಟೋ ಪಾಥ್ ಇದ್ದರೂ ಅಲ್ಲಿ ನಿಲುಗಡೆ ಮಾಡುತ್ತಿಲ್ಲ. ಬದಲಾಗಿ ಒಂದೆಡೆ ಆಟೋಗಳನ್ನು ಗುಡ್ಡೆ ಹಾಕಿಕೊಳ್ಳುತ್ತಿರುವು ದರಿಂದ ಸಾರ್ವಜನಿಕರ ಓಡಾಟಕ್ಕೆ ಕಷ್ಟವಾಗಿದೆ. ಹಾಗೂ ಬಸ್ಸು, ಲಾರಿ ಇತರೆ ವಾಹನಗಳು ಜೋರಾಗಿ ಹಾರ್ನ್ ಮಾಡುತ್ತಿರುವುದರಿಂದ ಕೆಲವು ರಸ್ತೆಗಳಲ್ಲಿ ಅತ್ಯಂತ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಿದರು.
ಮತೋರ್ವರು ಬೆಳಗ್ಗಿನ ಜಾವ ೫ ರ ನಂತರ ಸಹ ಆಟೋದವರು ೧ ಅರ್ಧ ಚಾರ್ಜ್ ಮಾಡುತ್ತಿ ದ್ದಾರೆ. ಮೀಟರ್ ಹಾಕುವುದಿಲ್ಲವೆಂದು ದೂರಿದರು.


ಜಿಲ್ಲಾಧಿಕಾರಿಗಳು, ಹೀಗೆ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ಆಟೋ ನಿಲ್ಲಿಸಿದ ಚಾಲಕರಿಗೆ ಸರ್ಕಲ್ ಇನ್ಸ್‌ಪೆಕ್ಟರ್ ದಂಡ ವಿಧಿಸಬೇಕು. ಜೋರಾಗಿ ಹಾರ್ನ್ ಕಂಡುಬಂದಲ್ಲಿ ಪೊಲೀಸ್ ಠಾಣೆಯ ಸಂಖ್ಯೆಗೆ ಒಂದು ದೂರು ಸಲ್ಲಿಸಿದಲ್ಲಿ ಕ್ರಮ ವಹಿಸಲಾಗುವುದು. ಆಟೋಗಳಲ್ಲಿ ಮೀಟರ್ ಹಾಕಬೇಕು. ಹಾಗೂ ರಾತ್ರಿ ೧೦ ರಿಂದ ಬೆಳಿಗ್ಗೆ ೫ ರವರೆಗೆ ಮಾತ್ರ ಒಂದೂ ಅರ್ಧ ಚಾರ್ಜ್ ತೆಗೆದು ಕೊಳ್ಳಬೇಕು. ನಂತರ ತೆಗೆದುಕೊಳ್ಳುವ ಹಾಗಿಲ್ಲ. ಈ ಸಮಯ ಮತ್ತು ದರದ ಕುರಿತು ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದು ಬೋರ್ಡ್ ಬರೆಸಿ ಹಾಕಿಸುವಂತೆ ತಿಳಿಸಿದರು.
ಪ್ರೀ-ಪೇಯ್ಡ್ ಕೌಂಟರ್ ತೆರೆಯಲು ಸೂಚನೆ : ಮೊದಲನೇ ಹಂತದಲ್ಲಿ ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಇನ್ನು ೨೦ ದಿನಗಳ ಒಳಗೆ ಆಟೋರಿಕ್ಷಾ ಪ್ರಿ-ಪೇಯ್ಡ್ ಕೌಂಟರ‍್ಗಳನ್ನು ತೆರೆಯಬೇಕೆಂದು ಆರ‍್ಟಿಓ ಅಧಿಕಾರಿಗೆ ಸೂಚಿಸಿದರು.
ಸಹ್ಯಾದ್ರಿ ಕಾಲೇಜು ಬಳಿಯ ಕೆಇಬಿ ವೃತ್ತದಲ್ಲಿ ಬಸ್ ಕಾಯುವವರ ಸಂಖ್ಯೆ ಹೆಚ್ಚಿದ್ದು, ಒಂದು ಬಸ್ ಶೆಲ್ಟರ್ ಸ್ಥಾಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಾರ್ವ ಜನಿಕರು ಮನವಿ ಮಾಡಿದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ಅನಿಲ್‌ಕುಮಾರ್ ಭೂಮರಡ್ಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಬಿ.ಶಂಕ್ರಪ್ಪ, ಕೆಎಸ್‌ಆರ‍್ಟಿಸಿ ಡಿಸಿ ವಿಜಯಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಸೇರಿದಂತೆ ಅಧಿಕಾರಿಗಳು, ನಾಗರೀಕ ಹಿತ ರಕ್ಷಣಾ ವೇದಿಕೆಯ ವಸಂತಕುಮಾರ್, ಇತರೆ ಪದಾಧಿಕಾರಿಗಳು, ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಮಾಲೀಕರ ಸಂಘದವರು, ಇತರರು ಹಾಜರಿದ್ದರು.

Exit mobile version