Site icon TUNGATARANGA

ಕರ್ನಾಟಕಕ್ಕೆ ಬರ್ಜರಿ ಗೆಲುವು/ ಪ್ರಖರ್ ನಾಲ್ಕು ಶತಕದ ದಾಖಲೆ ಮೊತ್ತ- ಸಿಎಂ ಅಭಿನಂದನೆ

ಶಿವಮೊಗ್ಗ,ಜ.17:
ಭರ್ಜರಿ ರನ್ ಗಳ ಅಂತರದಿಂದ ಶಿವಮೊಗ್ಗದ ನವುಲೆಯ ಕೆಎಸ್ ಸಿಎ ಮೈದಾನದಲ್ಲಿ ನಡೆದ ಕರ್ನಾಟಕ-ಮುಂಬೈ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಬಾರೀ ಅಂತರದ ಗೆಲುವು ಕಂಡಿದೆ.
ಕರ್ನಾಟಕ ಗೆಲ್ಲುವ ಜೊತೆಗೆ ಹೊಸ ದಾಖಲೆ ಸೃಷ್ಡಿಸಿದ್ದ ಪ್ರಖರ್ ಚತುರ್ವೇದಿ 404 ರನ್‌ಗಳಿಸಿ ಔಟಾಗದೆ ಉಳಿದುಕೊಂಡಿದ್ದರು. ಗ್ರಾಮೀಣ ಭಾಗದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ‌ಸಾಮಾಜಿಕ ಜಾಲತಾಣದಲ್ಲಿ ಹಾಡಿಹೊಗಳಿದ್ದಾರೆ.


79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ ಎಂದಿದ್ದಾರೆ.
ಆರಂಭಿಕ ಬ್ಯಾಟ್ ಮ್ಯಾನ್ ಪ್ರಖರ್‌ ಚತುರ್ವೇದಿ ಅಜೇಯ 404 ರನ್‌ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ ಎಂದು ಟ್ವಿಟರ್ ಮತ್ತು ಫೇಸ್ ಬುಕ್ ನಲ್ಲಿ ಶುಭ ಹಾರೈಸಿದ್ದಾರೆ.

Exit mobile version