Site icon TUNGATARANGA

ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆ/ ಡ್ರೆಸ್ ಹೆಂಗಿರಬೇಕು ನೋಡ್ಕೊಳ್ಳಿ

ಸಾಂದರ್ಭಿಕ ಚಿತ್ರ


ಶಿವಮೊಗ್ಗ, ಜ. 24:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11.00 ರಿಂದ 12.30ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದ್ದು, ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಲಾಗಿದೆ.

ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ ಎಂದು ಡಿ.ಐ.ಜಿ.ಪಿ. ನೇಮಕಾತಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

.

Exit mobile version