ಸಂವಿಧಾನ ಕರ್ತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಹೇಳಿದಂತೆ ಸಮಾಜದ ಶ್ರೇಯೋಭಿವೃದ್ದಿಯೇ ನಮ್ಮ ಸಂವಿಧಾನದ ಅಂತಿಮ ಆಶಯವೆಂದು ಅರಿತು ಅಭಿವೃ ದ್ದಿಯ ಪಥದಲ್ಲಿ ನಾವೆಲ್ಲ ನಡೆಯೋಣವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ನುಡಿದರು.
ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಏರ್ಪಡಿ ಸಲಾಗಿದ್ದ ೭೫ ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತವನ್ನು ವಿಶ್ವಮಾನ್ಯ ಹಾಗೂ ಬಲಾಢ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ತಮ್ಮ ತನು-ಮನ-ಧನಗಳಿಂದ ತ್ಯಾಗಗೈದ, ಬಲಿದಾನ ನೀಡಿದ ನಾಯಕರನ್ನು, ಅಸಂಖ್ಯಾತ ಯೋಧರನ್ನು ಹಾಗೂ ದೇಶಾಭಿಮಾನಿಗಳನ್ನು ನೆನೆಯುವುದು ಮತ್ತು ಅವರು ಆಶಿಸಿದಂತೆ ರಾಷ್ಟ್ರವನ್ನು ಅಭ್ಯುದಯದ ಪಥದಲ್ಲಿ ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ.
ಸಮಾಜವಾದದಲ್ಲಿ ನಂಬಿಕೆಯುಳ್ಳ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನಗರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಪಾಲು-ಸರ್ವ ರಿಗೂ ಸಮಬಾಳು ಎಂಬ ತತ್ವದಡಿಯಲ್ಲಿ ನಂಬಿಕೆಯಿರಿಸಿದ್ದು ಹಲವು ಹೊಸ ಯೋಜ ನೆಗಳ ಮೂಲಕ ನಾಡಿನ ಸರ್ವತೋಮುಖ ಅಭಿವೃದ್ದಿಗೆ ವಿಶೇಷ ಗಮನ ಹರಿಸಿದೆ.
ಜಿಲ್ಲೆಯಲ್ಲಿ ಆಯುಷ್ ವಿಶ್ವವಿದ್ಯಾಲಯ ವನ್ನು ಪ್ರಾರಂಭಿಸಲು ಸರ್ಕಾರವು ಅನುಮತಿ ನೀಡಿದ್ದು ಈಗಾಗಲೇ ರೂ.೨೦ ಕೋಟಿ ಪ್ರಾರಂಭಿಕ ಅನುದಾನ ಬಿಡುಗಡೆ ಮಾಡಿದೆ. ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ರೂ.೨೨ ಕೋಟಿ ಮಂಜೂರು ಆಗಿದೆ. ಜಿಲ್ಲೆ ಯಲ್ಲಿ ಕೈಗಾರಿಕಾ ಬೆಳವಣಿಗೆ, ಪ್ರವಾಸೋ ದ್ಯಮ ಅಭಿವೃದ್ದಿಗಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದ್ದು, ಶಿವಮೊಗ್ಗ ಫೋಕಸ್ ಹಾಗೂ ಕೈಗಾರಿಕಾ ಮೇಳ ನಡೆಸಲು ಸಿದ್ದತೆ ನಡೆಸಲಾಗಿದೆ. ಹಾಗೂ ಉದ್ಯೋಗ ಮೇಳ ಮತ್ತು ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿಶೇಷ ವಂದನೆ : ಜಿಲ್ಲಾ ಪೊಲೀಸ್ ವತಿಯಿಂದ ರಾಗಿಗುಡ್ಡದಲ್ಲಿ ಸೌಹಾರ್ದ ಕ್ರೀಡಾಕೂಟ ನಡೆಸುವ ಮೂಲಕ ಕುವೆಂಪು ರವರ ಸರ್ವಜನಾಂಗದ ಶಾಂತಿಯ ತೋಟಕ್ಕೆ ಉತ್ತಮ ಉದಾಹರಣೆಯಾಗಿರುವುದಕ್ಕೆ ನಾನು ವಿಶೇಷ ಅಭಿನಂದನೆ ಸಲ್ಲಿಸುತ್ತೆನೆ ಎಂದರು.
ರಾಷ್ಟ್ರಪತಿ ಪ್ರಶಸ್ತಿ ಪಡೆದ ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿಯವರನ್ನು ಅಭಿನಂದಿಸಲಾಯಿತು.
ಶಾಸಕರಾದ ಎಸ್ ಎನ್ ಚನ್ನಬಸಪ್ಪ, ರುದ್ರೆಗೌಡರು, ಅರುಣ್ ಕುಮಾರ್, ಜನಪ್ರತಿ ನಿಧಿಗಳು, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಇತರೆ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು ಪಾಲ್ಗೊಂಡಿದ್ದರು.