Site icon TUNGATARANGA

ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿ / 67 ನೇ ರಾಷ್ಟ್ರಮಟ್ಟದ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟ ಉದ್ಘಾಟನೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ

ಶಿವಮೊಗ್ಗ ಜ. ೨೯:
ಯಾವುದೇ ವ್ಯಕ್ತಿಯ ಬೌದ್ಧಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು.


ಅವರು ಇಂದು ಜಿಲ್ಲಾಡಳಿತ, ಜಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿ ಸಲಾಗಿದ್ದ ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಸ್ಕೂಲ್ ಗೇಮ್ಸ್ ಆಫ್ ಇಂಡಿಯಾ ೬೭ನೇ ರಾಷ್ಟ್ರಮಟ್ಟದ ೧೯ವರ್ಷ ವಯೋಮಿತಿಯೊಳಗಿನ ಬಾಲಕಿ ಯರ ವಾಲಿಬಾಲ್ ಕ್ರೀಡಾಕೂಟ ವನ್ನು ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳ ಪಠ್ಯ ಚಟುವಟಿಕೆ ಗಳಷ್ಟೇ ಅಲ್ಲದೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವ ಅಗತ್ಯ

ಹಿಂದೆಂದಿಗಿಂತ ಇಂದು ಹೆಚ್ಚು ಅಗತ್ಯವಿದೆ. ಸರ್ಕಾರಗಳು ಮಾಡುವ ಮಕ್ಕಳ ಮನೋವಿಕಾಸದ ಕಾರ್ಯವನ್ನು ಹಲವು ದಶಕಗಳಿಂದ ನಿರ್ವಹಿಸುತ್ತಿ ರುವ, ಕ್ರೀಡಾಕೂಟದ ಆತಿಥ್ಯ ವಹಿಸಿರುವ ಹಾಗೂ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸದ್ವಿಚಾರವನ್ನು ಬೆಳೆಸುತ್ತಿರುವ ಆದಿಚುಂಚನಗಿರಿ ಟ್ರಸ್ಟ್‌ನ ಕಾರ್ಯ ಅಭಿನಂದನಾರ್ಹ ವಾದುದಾಗಿದೆ. ಈ ಕ್ರೀಡಾಕೂಟಕ್ಕೆ ದೇಶದ ೨೮ರಾಜ್ಯಗಳ ಕ್ರೀಡಾಳುಗಳು

ಭಾಗವಹಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದ ಅವರು ಈ ಕ್ರೀಡಾಕೂಟವು ಯಶಸ್ವಿಯಾಗಿ ನಡೆಯುವಲ್ಲಿ ಅಗತ್ಯವಿರುವ ಎಲ್ಲಾ ಸಹಕಾರವನ್ನು ಸರ್ಕಾರದಿಂದ ನೀಡಲಾಗುವುದು ಎಂದರು.
ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯ ಅನಾವರಣಗೊಳಿಸಲು ವೇದಿಕೆಗಳನ್ನು ಒದಗಿಸುವುದು ಇಂದಿನ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಹಾಗೂ ಅದಕ್ಕೆ ಪ್ರೇರೇಪಣೆ ನೀಡುತ್ತಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಇನ್ನಷ್ಟು ರಚನಾತ್ಮಕ ಕಾರ್ಯಗಳನ್ನು ನಿರ್ವಹಿಸಲಿ ಎಂದವರು ಆಶಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿ ತರಿದ್ದ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಅವರು ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾ ಳುಗಳು ಸ್ಪರ್ಧಾಭಾವದಿಂದಲೇ ಭಾಗವಹಿಸಬೇಕು. ಗೆಲವು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ ಗೆಲ್ಲುವ ಮನೋಭಾವ ಅಗತ್ಯ. ಸೋಲು ಗೆಲುವಿಗೆ ಮಾರ್ಗ ದರ್ಶಿಯಾಗಿರಲಿದೆ ಮಾತ್ರವಲ್ಲ ಬದುಕಿಗೊಂದು ಪಾಠವಾಗಿರಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಮಾನ ವೀಯ ಸಂಬಂಧಗಳು, ಕೌಟುಂಬಿಕ ಸಂಬಂಧಗಳು, ಗುರು-ಶಿಷ್ಯ ಸಂಬಂಧಗಳು ಯಾಂತ್ರಿಕವಾಗಿರುವ ಈ ದಿನಗಳಲ್ಲಿ ರಾಜ್ಯರಾಜ್ಯಗಳ ನಡುವೆ ಸಂಬಂಧವನ್ನು ಬೆಸೆಯುವ, ಮನಸ್ಸುಗಳನ್ನು ಒಗ್ಗೂಡಿಸುವ ಕಾರ್ಯ ಅತ್ಯಂತ ಮಹತ್ವ ಪಡೆದು ಕೊಳ್ಳುತ್ತವೆ. ಸ್ವಸ್ಥ್ಯ ಸಮಾಜದ ನಿರ್ಮಾಣದಲ್ಲಿ ಸಂಸ್ಕಾರ ಹಾಗೂ ಜೀವನಶಿಕ್ಷಣ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಕ್ರೀಡಾ ಕೂಟದ ಯಶಸ್ಸಿಗೆ ಶುಭ-ಹಾರೈಸಿದರು.


ವಿಶೇಷ ಆಹ್ವಾನಿತ ರಾಗಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕಿ ಶ್ರೀಮತಿ ಸಿಂಧು ಬಿ.ರೂಪೇಶ್ ಅವರು ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಅನೇಕ ಯಶಸ್ವಿ ಕ್ರೀಡಾಕೂಟಗಳನ್ನು ಆಯೋಜಿಸಿದ ಹೆಮ್ಮೆ ನಮಗಿದೆ. ದೇಶದ ಅನ್ಯರಾಜ್ಯಗಳಿಂದ ಆಗಮಿಸಿದ ಎಲ್ಲಾ ಕ್ರೀಡಾಳುಗಳು ತಮ್ಮ ಗೆಲುವಿನ ನಗು ಮೊU ದೊಂದಿಗೆ ಹಿಂದಿರುಗುವಂತೆ ಹಾರೈಸಿದರು. ಅದಕ್ಕಾಗಿ ಆತಿಥೇ, ಯರಾಗಿರುವ ಸಂಸ್ಥೆಗೆ ಸರ್ಕಾರದ ಪರವಾಗಿ ಧನ್ಯವಾದ ಗಳನ್ನು ಸಮರ್ಪಿಸಿದರು.


ಇದೇ ಸಂದರ್ಭದಲ್ಲಿ ಅಂತ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ದಲ್ಲಿ ವಿಶೇಷ ಸಾಧನೆ ಮಾಡಿದ ಕು. ಹನಿ ಇವರನ್ನು ಗುರುತಿಸಿ ಗೌರವಿ ಸಲಾಯಿತು. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿ ಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಮಾಯಣ್ಣಗೌಡ, ಬಿ.ಕೃಷ್ಣಪ್ಪ, ಅನಿಲ್‌ಭೂಮರೆಡ್ಡಿ, ಗುಬ್ಬಿಗೂಡು ರಮೇಶ್, ಸಂಜಯ್ ಮತ್ತಿತರರು ಉಪಸ್ಥಿತರಿದ್ದರು,.

Exit mobile version