Site icon TUNGATARANGA

ಸಂತ ಸೇವಾಲಾಲರ ಆದರ್ಶಗಳನ್ನು ಅಳವಡಿಸಿಕೊಳ್ಳೋಣ : ತಹಶೀಲ್ದಾರ್ ಗಿರೀಶ್


ಶಿವಮೊಗ್ಗ, ಫೆಬ್ರವರಿ 15
      ಸಂತ ಸೇವಾಲಾಲ್‍ರ ಆದರ್ಶ ಮತ್ತು ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ನಿಜವಾದ ಅರ್ಥವನ್ನು ಕಲ್ಪಿಸಬೇಕಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಅವರು ತಿಳಿಸಿದರು.


      ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಬಂಜಾರ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


     ಮಹಾನ್ ವ್ಯಕ್ತಿಗಳು ಹಾಗೂ ದಾರ್ಶನಿಕರ ಜೀವನ ಚರಿತ್ರೆ, ಅವರ ತತ್ವ ಮತ್ತು ಆದರ್ಶವನ್ನು ಪ್ರತಿಯೊಬ್ಬರು ತಿಳಿಯಬೇಕೆಂದ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಕಾರ್ಯಕ್ರಮಗಳನ್ನು ಆಯೋಜಿಸ ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ.
      ಆದರೆ ಜಯಂತಿಗಳು ಕೇವಲ ಸರ್ಕಾರಿ ಆಚರಣೆಗಳಾಗಿ ಉಳಿಯಬಾರದು. ಎಲ್ಲರೂ ಸೇರಿ ಆಚರಿಸಬೇಕು. ಪ್ರತಿಯೊಬ್ಬರೂ ಕೂಡ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಮತ್ತು ಜೀವನ ಆದರ್ಶ, ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


     ಈ ಸಂದರ್ಭದಲ್ಲಿ ಸಂತ ಸೇವಾಲಾಲ್ ಮಹಾಮಠದ ಗೋಶಾಲಾ ಸಮಿತಿ ಅಧ್ಯಕ್ಷರಾದ ಎಂ.ವೈ ನಾನ್ಯನಾಯ್ಕ್, ಬಂಜಾರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಆಯನೂರು ಶಿವನಾಯ್ಕ್, ಪ್ರಧಾನ ಕಾರ್ಯದರ್ಶಿ ಬಿ.ಆರ್ ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಬಂಜಾರ ಸಮಾಜ ಮುಖಂಡರು ಉಪಸ್ಥಿತರಿದ್ದರು.

Exit mobile version