Site icon TUNGATARANGA

ಸರ್ಕಾರಿ ನೌಕರರ ಹೋರಾಟ ಅನಗತ್ಯ, ಬೇಡಿಕೆಗೆ ಸಿಎಂ ಸ್ಪಂದನೆ: ಷಡಾಕ್ಷರಿ ಇಂಗಿತ/ ಸಮ್ಮೇಳನಕ್ಕೆ ಕರೆ


ಶಿವಮೊಗ್ಗ, ಫೆ.15;
ಸರ್ಕಾರಿ ನೌಕರರ ವೇತನ ಹೆಚ್ಚಳ ಆಗಲಿದೆ. ಯಾವುದೇ ಹೋರಾಟ ಮಾಡುವ ಅಗತ್ಯವಿಲ್ಲ. ಅಂಥ ಸ್ಥಿತಿ ಬರೋದಿಲ್ಲ. ಈ ಬಗ್ಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಇಂದಿಲ್ಲಿ ತಿಳಿಸಿದ್ದಾರೆ.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಒಂದು ವೇಳೆ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಅನಿವಾರ್ಯ ಆಗುತ್ತದೆ ಅಷ್ಟೆ ಎಂದರು.


ಸಮ್ಮೇಳನಕ್ಕೆ ಬನ್ನಿ
ಫೆ. 27ರಂದು ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿದೆ.
ಈ ಸಮ್ಮೇಳನಕ್ಕೆ ಮೂರು ಲಕ್ಷಕ್ಕೂ ಹೆಚ್ಚು ನೌಕರರು ಭಾಗಿಯಾಗುತ್ತಿದ್ದು ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೌಕರರನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಡಾ ಸಿ ಎನ್ ಮಂಜುನಾಥ್ ನೌಕರರ ಒತ್ತಡದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಅಧಿಕಾರಿ ಶಾಲಿನಿ ರಜನೀಶ್ ಅವರುಆಡಳಿತ ಅಭಿವೃದ್ಧಿ ಬಗ್ಗೆ ಮಾತನಾಡಲಿದ್ದಾರೆ ಎಂದರು.


ಈ ಕಾರ್ಯಕ್ರಮದಲ್ಲಿ ಸರ್ಕಾರದ ಎಲ್ಲಾ ಸಚಿವರು ಇರಲಿದ್ದಾರೆ. ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಆರಂಭ ಆಗಿ ಮಧ್ಯಾಹ್ನ 3 ಗಂಟೆವರೆಗೆ ಇರಲಿದೆ. ಸಮ್ಮೇಳನಕ್ಕೆ ಬರುವ ನೌಕರರಿಂದ ಯಾವುದೇ ಶುಲ್ಕ ಪಡೆಯುತ್ತಿಲ್ಲ. ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಿಂದ ಬರುವ ನೌಕರರಿಗೆ ಬಸ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿದೆ. ಕಳೆದ ಏಳು ವರ್ಷಗಳಿಂದ ಸಮ್ಮೇಳನ ಮಾಡಿರಲಿಲ್ಲ ಆದರೆ ಈ ವರ್ಷ ಸಂಘಟನಾತ್ಮಕವಾಗಿ ಶಕ್ತಿ ತೋರಿಸಲು ಸಮ್ಮೇಳನ ಮಾಡುತ್ತಿದ್ದೇವೆ ಎಂದರು.

Exit mobile version