Site icon TUNGATARANGA

ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ/ಅಸಕ್ತರು ಕೊಟ್ಟಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ


ಶಿವಮೊಗ್ಗ, ಫೆ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ  2024-25ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದೂಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.


ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಮಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು.  


ಅರ್ಹ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in ರಲ್ಲಿ ಮಾರ್ಚ್ 15 ರೊಳಗಾಗಿ ಸಲ್ಲಿಸುವುದು. ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾನ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಮೇಲಿನಹನಸವಾಡಿ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -9483623537, ಭದ್ರಾವತಿಯ ದೊಡ್ಡೆರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-8310350361, ಶಿಕಾರಿಪುರ ಉಡುಗಣಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -9036866642, ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ

ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029, ಸಾಗರ-7338222907 ಗಳನ್ನು ಸಂಪರ್ಕಿಸುವುದು.

Exit mobile version