ಶಿವಮೊಗ್ಗ, ಫೆ.೨೦: ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘೋಷವಾಕ್ಯವನ್ನು ಬದಲಾವಣೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಶಿವಮೊಗ್ಗ ನಗರ ಘಟಕದ ವತಿಯಿಂದ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ರಾಜ್ಯದ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಘೋಷವಾಕ್ಯವಾದ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ” ಎಂದ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯ್ಯವಾಗಿ ಪ್ರಶ್ನಿಸು ಎಂದು ಬದಲಾವಣೆ ಮಾಡಿದ್ದಾರೆ. ಇದು ಮಕ್ಕಳ ತಿಳಿಮನಸ್ಸಿನಲ್ಲಿ ಕಲ್ಲು ಹಾಕುವ ನೀಚ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಯಾದ ಹೆಚ್.ಸಿ.
ಮಹಾದೇವಪ್ಪನವರು ಮಾಡಿದ್ದು, ರಾಷ್ಟ್ರಕವಿ ಕುವೆಂಪು ಅವರ ಘೋಷ ವಾಕ್ಯವನ್ನು ತೆಗೆದುಹಾಕಿ ಕುವೆಂಪು ಅವರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಕೂಡಲೇ ಸಚಿವ ಮಹಾದೇವಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಯುವಮೋರ್ಚಾ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್.ಚೆನ್ನಬಸಪ್ಪ, ಮಾಜಿ ಶಾಸಕ ಆರ್.ಕೆ.ಸಿದ್ರಾಮಣ್ಣಾ, ಮೋಹನ್ ರೆಡ್ಡಿ, ಧೀನ್ ದಯಾಳ್, ಮಂಜುನಾಥ್ ನವುಲೆ, ಯುವಮೋರ್ಚಾ ಪ್ರಮುಖರಾದ ರಾಹುಲ್ ಪಿ.ಬಿದರೆ, ಯುವರಾಜ್, ಅಭಿಷೇಕ್ ಮತ್ತಿತರರು ಇದ್ದರು.