Site icon TUNGATARANGA

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ದ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಒತ್ತಾಯ/ಭಜರಂಗ ದಳದ ವತಿಯಿಂದ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

ಸಾಗರ : ರಾಜ್ಯಸಭಾ ಚುನಾವಣೆ ವಿಜಯೋತ್ಸವ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ದ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿ

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ, ಕರ್ನಾಟಕದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲಿ ರಾಜ್ಯಸಭಾ ನೂತನ ಸದಸ್ಯ ನಾಸೀರ್ ಹುಸೇನ್ ವಿಜಯೋತ್ಸವ

ಸಂದರ್ಭದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಯಾವ ಸ್ಥಳದಲ್ಲಿ ಭಾರತ್ ಮಾತಾಕೀ ಜೈ ಎನ್ನಬೇಕಾಗಿತ್ತೋ ಅಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಘೋಷಣೆ

ಕೂಗಿರುವುದು ನೀಚಮನಸ್ಥಿತಿಗೆ ಸಾಕ್ಷಿಯಾಗಿದೆ. ಇಂತಹದ್ದನ್ನು ಕಾಂಗ್ರೇಸ್ ಪಕ್ಷ ಸಮರ್ಥಿಸಿಕೊಂಡಿರುವುದು ದುರದೃಷ್ಟಕರ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾಸೀರ್ ಹುಸೇನ್ ಸದಸ್ಯತ್ವವನ್ನು ತಕ್ಷಣ ರದ್ದುಮಾಡಬೇಕು ಎಂದು ಒತ್ತಾಯಿಸಿದರು.


ಭಜರಂಗ ದಳದ ಜಿಲ್ಲಾ ಸಂಯೋಜಕ ಸಂತೋಷ್ ಶಿವಾಜಿ ಮಾತನಾಡಿ, ರಾಜ್ಯಸಭಾ ಚುನಾವಣೆ ವಿಜಯೋತ್ಸವ ಸಂದರ್ಭದಲ್ಲಿ ನಡೆದಿರುವ ಘಟನೆ ಖಂಡನೀಯ. ದೇಶವಿರೋಧಿಗಳಿಗೆ ತಕ್ಕಶಿಕ್ಷೆಯಾಗಬೇಕು. ನಾಸೀರ್ ಹುಸೇನ್ ಅವರ ಸದಸ್ಯತ್ವ ರದ್ದುಗೊಳಿಸುವ ಜೊತೆಗೆ ಪ್ರಕರಣವನ್ನು ಎನ್.ಐ.ಎ. ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಕೆ.ವಿ.ಪ್ರವೀಣ್, ಎಸ್.ವಿ.ಕೃಷ್ಣಮೂರ್ತಿ, ಮಂಜುಗೌಡ, ಕಿರಣ್ ಗೌಡ, ಸುದರ್ಶನ್, ಐ.ವಿ.ಹೆಗಡೆ, ವಿಶಾಲ್, ಸುನೀಲ್ ರುದ್ರಪ್ಪ, ನವೀನ್ ಯಳವರಸೆ, ಕೀರ್ತಿ ಬೊಮ್ಮತ್ತಿ. ಅರುಣ್ ಇನ್ನಿತರರು ಹಾಜರಿದ್ದರು

Exit mobile version