Site icon TUNGATARANGA

ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಲುಪಿಸಿ/ ಶಿವಮೊಗ್ಗ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವಿನ ಕೊಡುಗೆಯನ್ನು ನೀಡುತ್ತಾರೆ:ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ,ಮಾ.೧: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯೂ ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಪಕ್ಷದ ಶಕ್ತಿಯೇ ಬೂತ್‌ಮಟ್ಟದ ಕಾರ್ಯಕರ್ತರು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.


ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಲುಪಿಸಿ ಶಿವಮೊಗ್ಗ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವಿನ ಕೊಡುಗೆಯನ್ನು ನೀಡುತ್ತಾರೆ ಎಂಬ ಭರವಸೆ ಇದೆ ಎಂದರು.


ಜಾತಿಗಣತಿ ಬಗ್ಗೆ ಯಾರೂ ವಿರೋಧಿಸುತ್ತಿಲ್ಲ. ಸರ್ಕಾರ ರಾಜಕೀಯ ಮಾಡದೇ ಜನಗಣತಿ ವರದಿಯನ್ನು ಕೂಲಕುಂಷವಾಗಿ ಪರಿಶೀಲಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದರು.


ಶಕ್ತಿ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದಕ್ಕೆ ಎಫ್‌ಎಸ್‌ಎಲ್ ವರದಿಯ ಅವಶ್ಯಕತೆ ಇರಲಿಲ್ಲ ರಾಜ್ಯ ಸರ್ಕಾರ ಮುಸ್ಲಿಂರ ಓಲೈಕೆಯಿಂದಾಗಿ ಇಂತಹ ಘೋಷಣೆಗಳು ಕೂಗಿಬರುತ್ತಿವೆ. ಇನ್ನಾದರೂ ಇಂತಹ ತುಷ್ಟೀಕರಣವನ್ನು ಕೈಬಿಡಬೇಕು ಎಂದರು.

Exit mobile version