ಶಿವಮೊಗ್ಗ, ಮಾರ್ಚ್ ೦೬, : ಮಾರ್ಚ್ ೦೮ ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ
ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.