ಶಿವಮೊಗ್ಗ : ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಜಿ.ಜಿ.ಸುರೇಶ್ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳಿಂದ ದಾಳಿ ನಡೆಸಿ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ.
ಶಿವಮೊಗ್ಗ ನಗರದ ಮಲ್ಲೇಶ್ವರ ನಗರದಲ್ಲಿರುವ ಅವರ ಮನೆ, ಗೋಪಾಲಗೌಡ ಬಡಾವಣೆಯಲ್ಲಿರುವ ಮನೆ, ಭದ್ರಾವತಿ ಹುಣಸೇಕಟ್ಟೆಯಲ್ಲಿರುವ ತೋಟ ಮತ್ತು ಮನೆ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಕಛೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುರೇಶ್ ಅವರ ಮನೆಯಲ್ಲಿರುವ ಚಿನ್ನಾಭರಣಗಳು ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.
ದಾಳಿಯಲ್ಲಿ ನಿಗ್ರಹದಳದ ಪೂರ್ವ ವಲಯ ಎಸ್.ಪಿ.ಜಯಪ್ರಕಾಶ್, ಶಿವಮೊಗ್ಗ ಎಸಿಬಿ ಡಿಎಸ್‌ಪಿ ಲೋಕೇಶ್, ದಾವಣಗೆರೆ ಡಿಎಸ್‌ಪಿ ಪರಮೇಶ್ವರ್, ಇನ್ಸ್‌ಪೆಕ್ಟರ್ ವೀರೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿದೆ.