Site icon TUNGATARANGA

ಚಂದ್ರಗುತ್ತಿ ಶ್ರೀ ರೇಣುಕಮ್ಮ ದೇವಿ ಜಾತ್ರೆ: ಬೆತ್ತಲೆ ಸೇವೆ ನಿಷೇಧ, ಪೂಜಾ ವಿಧಿ-ವಿಧಾನಗಳಿಗೆ ಅನುಮತಿ


ಶಿವಮೊಗ್ಗ : ಮಾರ್ಚ್ : ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವೆ ಜಾತ್ರೆಯು ಮಾರ್ಚ್ ೧೫ ರಿಂದ ೨೦ ರವರೆಗೆ ನಡೆಯಲಿದ್ದು, ಚಂದ್ರಗುತ್ತಿ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ ೫ ಕಿ ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರು ಅಧಿಸೂಚನೆ ಹೊರಡಿಸಿದ್ದಾರೆ.


ಹಾಗೂ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು,

ಈ ನಿಷೇಧಾಜ್ಞೆಯು ಶ್ರೀರೇಣುಕಮ್ಮ ದೇವಿಯ ರಥೋತ್ಸವ ಹಾಗೂ ಇತರೆ ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Exit mobile version